Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ – ರಾಜ್ಯ ಸರ್ಕಾರದಿಂದಲೇ ಅಂಬ್ಯುಲೆನ್ಸ್ ಸೇವೆ – ಸಚಿವ ದಿನೇಶ್ ಗುಂಡೂರಾವ್

    By Author AINMay 14, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: 108 ಅಂಬ್ಯುಲೆನ್ಸ್ ಗಳ ನಿರ್ವಹಣೆಯನ್ನ ಖಾಸಗಿ ಏಜನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು 108 ಅಂಬ್ಯುಲೆನ್ಸ್ ಗಳನ್ನು ಇಲ್ಲಿಯ ವರೆಗೆ ಖಾಸಗಿ ಏಜನ್ಸಿಗಳು ನಿರ್ವಹಿಸುತ್ತಿದ್ದವು.

    ಈ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರವೇ 108 ಅಂಬ್ಯುಲೆನ್ಸ್ ಗಳ ನಿರ್ವಹಣೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು, ಈಗಾಗಲೇ ಚಾಮರಾಜ ನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಗಿದೆ ಎಂದರು.

    Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್‌ ಆಗ್ತೀರಾ..

    108 ಅಂಬ್ಯುಲೆನ್ಸ್ ಗಳ ಸೇವೆ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಬಹು ಮುಖ್ಯವಾದದ್ದು. ಖಾಸಗಿ ಏಜನ್ಸಿಯಿಂದ ಇದರ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿರಲಿಲ್ಲ.. ಸರ್ಕಾರದಿಂದ ಏಜನ್ಸಿಗೆ ಹಣ ಪಾವತಿಯಾದರೂ, ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿಯಾಗುತ್ತಿರಲಿಲ್ಲ.

    ಸರ್ಕಾರ ಹಲವು ಬಾರಿ ಮದ್ಯಪ್ರವೇಶಿಸಿ ಅಂಬ್ಯುಲೆನ್ಸ್ ಡ್ರೈವರ್ ಗಳ ಸಮಸ್ಯೆಯನ್ನ ಬಗೆಹರಿಸಬೇಕಾಗಿತ್ತು.‌ ಸರ್ಕಾರವೇ ನಿರ್ವಹಣೆ ಮಾಡುವುದರಿಂದ ಇನ್ಮುಂದೆ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. 108 ಅಂಬ್ಯುಲೆನ್ಸ್ ಗಳ ಮಾಲಿಕತ್ವ ಸರ್ಕಾರದ ಬಳಿ ಇದೆ. ಅಂಬ್ಯುಲೆನ್ಸ್ ಗಳಿಗೆ ಡಿಸೇಲ್, ಪೆಟ್ರೋಲ್ ನಿಂದ ಹಿಡಿದು ವಾಹನ ಚಾಲಕರ ವೇತನವನ್ನು ಕೂಡಾ ಸರ್ಕಾರವೇ ನೀಡುತ್ತಿತ್ತು. ಕೇವಲ ಒಂದು ಕಮಾಂಡ್ ಸೆಂಟರ್ ಮೂಲಕ ಖಾಸಗಿ ಏಜನ್ಸಿಯವರು ನಿರ್ವಹಣೆ ಮಾಡುತ್ತಿದ್ದರು.

    ಏಜನ್ಸಿಯ ಬದಲು ಆರೋಗ್ಯ ಇಲಾಖೆಯೇ ನಡೆಸಿದರೆ ಸರ್ಕಾರದ ಬೊಕ್ಕಸಕ್ಕೂ ನೂರಾರು ಕೋಟಿ ಹಣ ಉಳಿತಾಯವಾಗಲಿದೆ. ಅಲ್ಲದೇ ವ್ಯವಸ್ಥೆಯಲ್ಲೂ ಸುಧಾರಣೆ ತರಬಹುದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈಗಾಗಲೇ ಚಾಮರಾಜ ನಗರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ 108 ಅಂಬ್ಯುಲೆನ್ಸ್ ನಿರ್ವಹಣೆಯನ್ನ ಆರೋಗ್ಯ ಇಲಾಖೆ ಯಶಸ್ವಿಯಾಗಿ ನಡೆಸಿದೆ.

    ಮುಂದಿನ ತಿಂಗಳಲ್ಲಿ ರಾಜ್ಯದ ಎಲ್ಲ ಸ್ಟೇಟ್ ಅಂಬ್ಯುಲೆನ್ಸ್ ಗಳನ್ನ ಇಲಾಖೆ ತನ್ನ ನಿರ್ವಹಣೆಯ ವ್ಯಾಪ್ತಿಗೆ ತೆಗೆದುಕೊಳ್ಳಲಿದೆ. ಇದಾದ ಬಳಿಕ ಮೂರು ತಿಂಗಳ ಒಳಗಾಗಿ 108 ಅಂಬ್ಯುಲೆನ್ಸ್ ಗಳನ್ನು ಆರೋಗ್ಯ ಇಲಾಖೆ ತನ್ನ ಕಮಾಂಡ್ ಕಂಟ್ರೋಲ್ ಸೆಂಟರ್ ವ್ಯಾಪ್ತಿಗೆ ತೆಗೆದುಕೊಂಡು ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳಲಿದೆ ಎಂದರು. ಬೆಂಗಳೂರಿನಲ್ಲಿ ಒಂದು ಕಮಾಂಡ್ ಸೆಂಟರ್ ಹಾಗೂ ಪ್ರತಿ ಜಿಲ್ಲೆಗಳಲ್ಲೂ ಪ್ರತ್ಯೇಕ ಕಮಾಂಡ್ ಸೆಂಟರ್ ಗಳನ್ನ ರಚಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರು| ಪ್ರತಿಷ್ಟಿತ ಐಸ್ ಕ್ರೀಂ ಪಾರ್ಲರ್ ಬಳಿ ಕಿಡಿಗೇಡಿಗಳ ಗೂಂಡಾವರ್ತನೆ!

    June 23, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

    June 23, 2025

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಪ್ರದೇಶದಲ್ಲಿ ಇರಲ್ಲ ಕರೆಂಟ್!

    June 22, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.