ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿರುವ ಘಟನೆ ಕುರಿತು ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದಾರೆ.
ಈ ರಾಶಿಯವರಿಗೆ ಆಸ್ತಿ ಸಂಪಾದನೆ, ಹಣಗಳಿಕೆ ಉತ್ತಮ: ಗುರುವಾರದ ರಾಶಿ ಭವಿಷ್ಯ 05 ಜೂನ್ 2025!
ಮೊದಲಿಗೆ ಮೊದಲಿಗೆ RCB ಪ್ರಾಂಚೈಸಿ X ಮಾಡಿದ್ದು, ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಅಲ್ಲಿ ನಡೆದ ಅನಾಹುತದ ಕುರಿತು ಮಾಧ್ಯಮ ವರದಿಗಳ ಮೂಲಕ ತಿಳಿದುಬಂದಿದೆ. ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ’ ಎಂದು ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಪ್ರಾಣ ಕಳೆದುಕೊಂಡವರಿಗೆ ಆರ್ಸಿಬಿ ಶೋಕ ವ್ಯಕ್ತಪಡಿಸುತ್ತದೆ ಮತ್ತು ಪೀಡಿತ ಕುಟುಂಬಗಳಿಗೆ ನಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ. ಪರಿಸ್ಥಿತಿಯ ಬಗ್ಗೆ ತಿಳಿದ ತಕ್ಷಣ, ನಾವು ನಮ್ಮ ಕಾರ್ಯಕ್ರಮವನ್ನು ತ್ವರಿತವಾಗಿ ಮುಗಿಸಿದ್ದೇವೆ ಮತ್ತು ಸ್ಥಳೀಯ ಆಡಳಿತದ ಮಾರ್ಗದರ್ಶನ ಮತ್ತು ಸಲಹೆಯನ್ನು ಅನುಸರಿಸಿದ್ದೇವೆ. ದಯವಿಟ್ಟು ಸುರಕ್ಷಿತವಾಗಿರುವಂತೆ ನಮ್ಮ ಅಭಿಮಾನಿಗಳಿಗೆ ನಾವು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನೂ ಆರ್ಸಿಬಿ ಅಭಿಮಾನಿಗಳು ಅತೀ ಹೆಚ್ಚು ಇಷ್ಟಪಡುವ ವಿರಾಟ್ ಕೊಹ್ಲಿ ಅವರು ಯಾವುದೇ ರೀತಿಯಾದ ಪ್ರತ್ಯೇಕ ಪೋಸ್ಟ್ಗಳನ್ನು ಕೂಡ ಹಂಚಿಕೊಂಡಿಲ್ಲ. ಆದ್ರೆ, ಅವರು ಆರ್ಸಿಬಿ ಅಧಿಕೃತ ಖಾತೆ ಮಾಡಿದ್ದ ಪೋಸ್ಟ್ ಅನ್ನೇ ರೀಪೋಸ್ಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.