ತುಮಕೂರು: ಇಂದು ಸಿದ್ದಗಂಗಾ ಮಠದ ಲಿಂಗೈಕ್ಯ ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳ 118ನೇ ಜನ್ಮದಿನೋತ್ಸವ. ಮುಂಜಾನೆಯಿಂದಲೇ ಶ್ರೀಗಳ ಗದ್ದುಗೆಯಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿವೆ.
ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಮಂತ್ರ ಘೋಷಗಳೊಂದಿಗೆ ಪೂಜೆ ಕಾರ್ಯಗಳು ನೆರೆವೇರುತ್ತಿದ್ದು, ವಿವಿಧ ಮಠಾಧಿಪತಿಗಳು ಭಾಗಿಯಾಗಿದ್ದಾರೆ.
ಸಭಾ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾಗಿಯಾಗಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹ ಸಚಿವ ಜಿ.ಪರಮೇಶ್ವರ್, ಕೇಂದ್ರ ಸಚಿವ ವಿ.ಸೋಮಣ್ಣ, ಸುತ್ತೂರು ಶ್ರೀಗಳು ಸೇರಿ ಹಲವರು ಉಪಸ್ಥಿತರಿರಲಿದ್ದಾರೆ.