ಕೋಲಾರ : ಸರ್ಕಾರಿ ಗುತ್ತಿಗೆಯ ಕಾಮಗಾರಿಯಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ಮಸೂದೆಯನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರದ ವಿರುದ್ದ ವಿಶ್ವ ಹಿಂದೂ ಪರಿಷದ್ ಭಜರಂಗದಳ ಕೋಲಾರ ವತಿಯಿಂದ ಬೃಹತ್ ಪ್ರತಿಭಟನೆಯನ್ನು ನಡೆಸಿದರು.
ನಗರದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರೈತ ವಿರೋಧಿ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಮಿಮರಿಗೆ 4% ಮೀಸಲಾತಿ, ಹಾಲಿನ ದರ ವಿದ್ಯುತ್ ದರವನ್ನು ಹೆಚ್ಚಿಸಿ ರೈತರಿಗೆ ಹಾಲಿನ ಪ್ರೊತ್ಸಾಹ ಧನವನ್ನು ನೀಡದೆ ವಂಚಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು