ಹಾವೇರಿ: ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹರಿಹರ ನಿವಾಸಿ ಫರಾನ್ (27), ರಾಣೆಬೆನ್ನೂರು ನಿವಾಸಿ ಎಮ್ಮಿಶಿಪಾ (16),
ಗೋವಾದ ಪಣಜಿ ನಿವಾಸಿಗಳಾದ ಅಲಿಷಾ (20), ಪುಲಖಾನ್ (17) ಮೃತರಾಗಿದ್ದು, ತಷ್ಕಿನ್ ರಾಣೆಬೆನ್ನೂರು, ಪಿರೋಜ್ ಗಾಯಗೊಂಡವರಾಗಿದ್ದು, ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಲು ನೀರಿಗೆ ಒಂದು ಚಿಟಿಕೆ ಈ ಪುಡಿ ಹಾಕಿ ಕುಡಿಯಿರಿ.. ಆಮೇಲೆ ರಿಸಲ್ಟ್ ನೋಡಿ!
ರಾಣೇಬೆನ್ನೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು, ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.