ಕೊಪ್ಪಳ:- 8 ಸಾವಿರ ಪೊಲೀಸ್ ಪೇದೆಗಳ ಹುದ್ದೆ ಶೀಘ್ರದಲ್ಲೇ ಭರ್ತಿ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.26 ರಿಂದ ಮಳೆ ಅಬ್ಬರ ಹೆಚ್ಚಳ: ಯೆಲ್ಲೋ ಅಲರ್ಟ್ ಘೋಷಣೆ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಕಳೆದ 5 ವರ್ಷದಲ್ಲಿ 8 ಸಾವಿರ ಪೊಲೀಸ್ ಪೇದೆ ಹುದ್ದೆ ಖಾಲಿ ಆಗಿದ್ದು, ಶೀಘ್ರದಲ್ಲೇ ಭರ್ತಿ ಮಾಡುತ್ತೇವೆ. ಈ ಹಿಂದಿನ ಸರ್ಕಾರ ಯಾವುದೇ ನೇಮಕಾತಿ ಮಾಡಿಲ್ಲ. ಹೀಗಾಗಿ ಒಂದಷ್ಟು ಕಡೆ ಸಿಬ್ಬಂದಿ ಕೊರತೆಯಿರುವ ಬಗ್ಗೆ ಮಾಹಿತಿ ಇದೆ. ಈ ಹಿಂದಿನ ಸರ್ಕಾರವಿದ್ದಾಗ ನಡೆದ ಪಿಎಸ್ಐ ಹಗರಣದಿಂದ ಯಾವುದೇ ಪಿಎಸ್ಐ ನೇಮಕಾತಿ ಪ್ರಕ್ರಿಯೆ ನಡೆಯಲಿಲ್ಲ. ನಮ್ಮ ಸರ್ಕಾರ ಎಲ್ಲವನ್ನೂ ಸರಿಪಡಿಸಿ, ಈಗಾಗಲೇ 500 ಪಿಎಸ್ಐ ಹುದ್ದೆಗೆ ನೇಮಕಾತಿ ಮಾಡಿದೆ. ಇನ್ನೂ 500 ಪಿಎಸ್ಐ ಹುದ್ದೆಗೆ ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಭರವಸೆ ನೀಡಿದರು.