ಬೆಂಗಳೂರು: 9 ಕೋಟಿ ಗೋಲ್ಡ್ ಖರೀದಿಸಿ ವಂಚನೆ ಮಾಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಐಶ್ವರ್ಯ ಅಲಿಯಾಸ್ ನವ್ಯಶ್ರೀಯ ಬೆಂಗಳೂರು ಹಾಗೂ ಮಂಡ್ಯದ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐಶ್ವರ್ಯ ಅವರ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮನೆ ಹಾಗೂ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆದಿದ್ದು,
ಫ್ರಿಡ್ಜ್ ನಲ್ಲಿ ಈ ಹಣ್ಣುಗಳನ್ನು ಇಡ್ತಿದ್ದೀರಾ!? ಇದರಿಂದ ದೇಹಕ್ಕಾಗುವ ಹಾನಿ ಎಷ್ಟು ಗೊತ್ತಾ!?
ಕಡತಗಳು ಹಾಗೂ ದಾಖಲೆಗಳ ಶೋಧ ಮಾಡಿದ್ದಾರೆ. ಇಬ್ಬರು ಸಿಆರ್ಪಿಎಫ್ ಸಿಬ್ಬಂದಿಯ ಭದ್ರತೆಯೊಂದಿಗೆ ಈ ದಾಳಿ ನಡೆದಿದೆ. ಐಶ್ವರ್ಯ ಗೌಡ ವಿರುದ್ಧ ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ವಂಚನೆ ಮಾಡಿದ ಆರೋಪವಿದೆ.
ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚನೆ ಎಸಗಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜ ಸಂಸದ ಡಿಕೆ ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್ನಲ್ಲೇ ಡಿಕೆ ಸುರೇಶ್ ದೂರು ನೀಡಿದ್ದರು.