Close Menu
Ain Live News
    Facebook X (Twitter) Instagram YouTube
    Saturday, May 10
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಬೆಂಗಳೂರು: ಮಳೆಯ ಅಭಾವ – ಗಗನಕ್ಕೇರಿದ ಈರುಳ್ಳಿ ಬೆಲೆ

    By AIN AuthorNovember 5, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು;- ಸಿಲಿಕಾನ್ ಸಿಟಿಯಲ್ಲಿ ಈರುಳ್ಳಿಯ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸಾಧಾರಣ ಗುಣಮಟ್ಟದ ಈರುಳ್ಳಿಯೂ ಕ್ವಿಂಟಲ್‌ಗೆ ₹ 4000 ದಿಂದ 4300 ರೂಪಾಯಿಗೆ ಮಾರಾಟವಾಗುತ್ತಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದ ಮೂಲಕ ಬೆಲೆ ನಿಯಂತ್ರಣದ ಉದ್ದೇಶಕ್ಕಾಗಿ ಇಲ್ಲಿಗೆ ಪೂರೈಸುತ್ತಿರುವ ಈರುಳ್ಳಿಯೂ ಸಹ ಕ್ವಿಂಟಲ್‌ಗೆ ಸುಮಾರು 4600 ರೂಪಾಯಿಗಳ ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಮಹಾರಾಷ್ಟ್ರದ ಈರುಳ್ಳಿ 6000 ರೂಪಾಯಿ ಗಡಿ ದಾಟುತ್ತಿದೆ.

    ಸಾಗಣೆ ವೆಚ್ಚ, ಕೂಲಿ, ಮತ್ತಿತರ ಕಾರಣದಿಂದ ಚಿಲ್ಲರೆ ಮಾರುಕಟ್ಟೆಗೆ ತಲುಪುವ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟೂ ಹೆಚ್ಚಾಗುತ್ತಿದೆ. ನಗರದ ಕೆ.ಆರ್‌. ಮಾರುಕಟ್ಟೆ, ಶೇಷಾದ್ರಿಪುರ, ಮಲ್ಲೇಶ್ವರ, ಜಯನಗರ ಮಾರುಕಟ್ಟೆಗಳಲ್ಲಿ ಕೆಜಿಗೆ 65 ರಿಂದ 75 ರೂಪಾಯಿ ವರೆಗೆ ಮಾರಾಟವಾಗುತ್ತಿದೆ. ಹಾಪ್‌ಕಾಮ್ಸ್ ಮತ್ತು ಇತರೆಡೆ ಉತ್ತಮ ಗುಣಮಟ್ಟದ ಈರುಳ್ಳಿಗೆ 85 ರೂಪಾಯಿ ವರೆಗೆ ನಿಗದಿಪಡಿಸಲಾಗಿದೆ. ಕಳೆದ ತಿಂಗಳು ಈರುಳ್ಳಿಯ ಬೆಲೆ ಕೇವಲ 25 ರೂಪಾಯಿ ಇದ್ದದ್ದು ಇಷ್ಟು ಹೆಚ್ಚಳವಾಗಿರುವುದು ಗ್ರಾಹಕರ ಕಣ್ಣಿನಲ್ಲಿ ನೀರನ್ನು ತರಿಸುತ್ತಿದೆ

    ಬರ ಪರಿಸ್ಥಿತಿ ಎದುರಾಗಿರುವ ಕಾರಣ ಈ ಬಾರಿ ರಾಜ್ಯದಲ್ಲಿ ಈರುಳ್ಳಿ ತೀರಾ ಕಡಿಮೆ ಪ್ರಮಾಣದಲ್ಲಿ ಬೆಳೆಯಲಾಗಿದೆ. ಮುಖ್ಯವಾಗಿ ಮಹಾರಾಷ್ಟ್ರ, ಗುಜರಾತ್‌ ಸೇರಿದಂತೆ ಹಲವು ರಾಜ್ಯಗಳಿಂದ ಈರುಳ್ಳಿ ಪೂರೈಕೆ ಕುಂಠಿತವಾಗಿರುವುದು ಬೆಲೆ ದಿನದಿಂದ ದಿನಕ್ಕೆ ಏರುಕಿಗೆ ಕಾರಣವಾಗಿದೆ. ಹೀಗೆಯೇ ಮುಂದುವರಿದರೆ ಇನ್ನು ಕೆಲ ದಿನಗಳಲ್ಲಿ ಮಾರಾಟ ಬೆಲೆ ಕೆಜಿಗೆ 100 ರಿಂದ 120 ರೂಪಾಯಿಗೆ ತಲುಪಬಹುದು ಎಂದು ವರ್ತಕರು ವಿಶ್ಲೇಷಿಸಿದ್ದಾರೆ.

    ಯಶವಂತಪುರ ಎಪಿಎಂಸಿಗೆ ಈ ವೇಳೆಯಲ್ಲಿ 1 ಲಕ್ಷಕ್ಕಿಂತ ಹೆಚ್ಚು ಮೂಟೆ ಈರುಳ್ಳಿ ಬರುತ್ತಿತ್ತು. ಆದರೆ, ಸದ್ಯ ಸುಮಾರು 60 ಸಾವಿರ ಮೂಟೆಗಳು ಮಾತ್ರ ಬಂದಿದೆ. ಬಾಗಲಕೋಟೆ, ಗದಗ, ವಿಜಯಪುರ ಸೇರಿ ಉತ್ತರ ಕರ್ನಾಟಕ ಭಾಗದಿಂದ ಕೂಡ ನಿರೀಕ್ಷಿತ ಪ್ರಮಾಣದ ಪೂರೈಕೆ ಇಲ್ಲ. ಮಹಾರಾಷ್ಟ್ರ, ಗುಜರಾತ್‌, ಮಧ್ಯಪ್ರದೇಶದಲ್ಲೂ ಮಳೆಯ ಅಭಾವದ ಕಾರಣ ಅಲ್ಲಿಂದಲೂ ಈರುಳ್ಳಿ ಬರುವುದು ಕಡಿಮೆಯಾಗಿದೆ. ಡಿಸೆಂಬರ್‌ ತಿಂಗಳಿನಲ್ಲಿ ಹಲವು ರಾಜ್ಯಗಳಿಂದ ಪೂರೈಕೆ ಹೆಚ್ಚಾಗಬಹುದು” ಎಂದು ಬೆಂಗಳೂರು ಆಲೂಗಡ್ಡೆ ಮತ್ತು ಈರುಳ್ಳಿ ವರ್ತಕರ ಸಂಘದ ಕಾರ್ಯದರ್ಶಿ ಬಿ. ರವಿಶಂಕರ್‌ ಮಾಹಿತಿ ನೀಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಟ್ಯಾಂಕರ್‌ ವಾಟರ್‌ ಮಾಫಿಯಾಗೆ ಬ್ರೇಕ್‌: ಸಂಚಾರಿ ಕಾವೇರಿಗೆ ಡಿ.ಕೆ. ಶಿವಕುಮಾರ್ ಚಾಲನೆ

    May 9, 2025

    ಸೂಸೈಡ್ ಬಾಂಬರ್ ಆಗೋಕೆ I AM READY: ಕೇಸರಿ ಟೀಂಗೆ ಸಚಿವ ಜಮೀರ್‌ ಟಕ್ಕರ್‌

    May 9, 2025

    ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬೆಂಗಳೂರಲ್ಲಿ ನಡೆದ ತಿರಂಗಾ ಯಾತ್ರೆಗೆ ಬಾರೀ ಜನಸ್ಪಂದನ: ಡಿ.ಕೆ ಶಿವಕುಮಾರ್

    May 9, 2025

    ಸೈನಿಕರ ಶ್ರೇಯೋಭಿವೃದ್ಧಿಗೆ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್‌ ಅಹ್ಮದ್‌!

    May 9, 2025

    IPL 2025: ಕ್ರಿಕೆಟ್ ಪ್ರೇಮಿಗಳಿಗೆ ಗುಡ್‌ ನ್ಯೂಸ್: BCCI ಮಹತ್ವದ ನಿರ್ಧಾರ ಪ್ರಕಟ – ಮುಂದಿನ ಪಂದ್ಯ ಯಾವಾಗ.?

    May 9, 2025

    IPL 2025: ಐಪಿಎಲ್ ಮುಂದೂಡಿಕೆ: ಪ್ರತಿಯೊಬ್ಬರ ಸುರಕ್ಷತೆಗಾಗಿ ನಾವು ಪ್ರಾರ್ಥಿಸುತ್ತೇವೆ ಎಂದ RCB!

    May 9, 2025

    ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣವನ್ನು ‌NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ, ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ: ಆರ್‌.ಅಶೋಕ್

    May 9, 2025

    ಸುಹಾಸ್ ಶೆಟ್ಟಿ ಹತ್ಯೆ ಕೇಸ್: NIAಗೆ ನೀಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ!

    May 9, 2025

    Bangalore: ಆಪರೇಷನ್ ಸಿಂಧೂರ್ ಬೆಂಬಲಿಸಿ ಕಾಂಗ್ರೆಸ್ ನಾಯಕರಿಂದ ತಿರಂಗಾ ಯಾತ್ರೆ!

    May 9, 2025

    PM Kisan: ರೈತರಿಗೆ ಗುಡ್ ನ್ಯೂಸ್: ಈ ದಿನದಂದು ಪಿಎಂ ಕಿಸಾನ್ 20ನೇ ಕಂತಿನ ಹಣ ಖಾತೆಗೆ ಜಮಾ

    May 9, 2025

    ಭಾರತ-ಪಾಕಿಸ್ತಾನ ಮಧ್ಯೆ ಉದ್ವಿಗ್ನತೆ: ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ʼನಲ್ಲಿ ಹೈಅಲರ್ಟ್!

    May 9, 2025

    ಭಾರತ-ಪಾಕ್‌ ಯುದ್ಧ: ಐಪಿಎಲ್‌ ಟೂರ್ನಿ ಮುಂದೂಡಿಕೆ!

    May 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.