Close Menu
Ain Live News
    Facebook X (Twitter) Instagram YouTube
    Saturday, June 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    SL vs BAN: ಆಟ ಆಡದೇ ಔಟ್ ಆದ ಏಂಜೆಲೊ ಮ್ಯಾಥ್ಯೂಸ್ – 146 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು

    By AIN AuthorNovember 6, 2023
    Share
    Facebook Twitter LinkedIn Pinterest Email
    Demo

    ಒಂದೂ ಬೌಲ್ ಆಡದೇ ಏಂಜೆಲೊ ಮ್ಯಾಥ್ಯೂಸ್ ಔಟ್ ಆಗಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ರೀತಿಯಾಗಿರುವುದು ಇದೇ ಮೊದಲು. ಅವರು ಒಂದೂ ಎಸೆತ ಎದುರಿಸದೇ ಔಟ್ ಆದ ಬ್ಯಾಟರ್ ಕೂಡ ಅವರಾದರು

    ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ 36 ವರ್ಷದ ಮ್ಯಾಥ್ಯೂಸ್ ಅವರು ಸದೀರ ಸಮರವಿಕ್ರಮ ಅವರು ಔಟಾದ ನಂತರ ಬ್ಯಾಟಿಂಗ್ ಮಾಡಬೇಕಿತ್ತು.

    ಆರನೇ ಕ್ರಮಾಂಕದ ಬ್ಯಾಟರ್‌ ಮ್ಯಾಥ್ಯೂಸ್ ಪಿಚ್‌ನತ್ತ ಬಂದರು. ಆದರೆ ಇದೇ ಸಂದರ್ಭದಲ್ಲಿ ತಮ್ಮ ಹೆಲ್ಮೆಟ್‌ನ ಪಟ್ಟಿ ಹರಿದಿದ್ದನ್ನು ಗಮನಿಸಿದರು. ಇನ್ನೊಂದು ಹೆಲ್ಮೆಟ್ ತರುವಂತೆ ಡಗ್‌ಔಟ್‌ನತ್ತ ಸಹ ಆಟಗಾರನಿಗೆ ಸನ್ನೆ ಮಾಡಿದರು. ಆದರೆ ಈ ಸಂದರ್ಭದಲ್ಲಿ ವೇಳೆ ಮೀರಿದ್ದನ್ನು ಗಮನಿಸಿದ ಬಾಂಗ್ಲಾ ಆಟಗಾರರು ಟೈಮ್‌ ಔಟ್‌ಗಾಗಿ ಮನವಿ ಸಲ್ಲಿಸಿದರು.

    ಒಬ್ಬ ಬ್ಯಾಟರ್ ಔಟ್ ಅಥವಾ ಗಾಯಗೊಂಡು ನಿವೃತ್ತಿಯಾಗಿ ನಿರ್ಗಮಿಸಿದ ಎರಡು ನಿಮಿಷಗಳ ಅವಧಿಯಲ್ಲಿ ಮತ್ತೊಬ್ಬ ಬ್ಯಾಟರ್ ಕ್ರೀಸ್‌ಗೆ ಬಂದು ಆಟ ಆರಂಭಿಸಬೇಕು ಎಂಬುದು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (40.1.1) ನಿಯಮವಾಗಿದೆ. ಅಲ್ಲದೇ ನಿಯಮ 40.1.2ರ ಪ್ರಕಾರ, ಬ್ಯಾಟರ್‌ ಕ್ರೀಸ್‌ಗೆ ಬರುವಲ್ಲಿ ವಿಳಂಬವಾದರೆ ಅಂಪೈರ್‌ಗಳು 16.3ರ ಅನ್ವಯ ಕ್ರಮ ಕೈಗೊಳ್ಳಬಹುದಾಗಿದೆ.

    ಅಂಪೈರ್‌ಗಳಾದ ಮರಾಯಿಸ್ ಎರಸ್ಮಸ್ ಮತ್ತು ರಿಚರ್ಡ್ ಇಲಿಂಗ್‌ವರ್ಥ್ ಅವರು ಏಂಜೆಲೊ ಮ್ಯಾಥ್ಯೂಸ್ ಅವರನ್ನು ಔಟ್ ಎಂದು ತೀರ್ಪು ನೀಡಿದರು. ಈ ಸಂದರ್ಭದಲ್ಲಿ ಚಕಿತಗೊಂಡ ಮ್ಯಾಥ್ಯೂಸ್ ಮತ್ತು ಇನ್ನೊಂದು ಬದಿಯಲ್ಲಿದ್ದ ಚರಿತ ಅಸಲಂಕಾ ಅವರು ಅಂಪೈರ್‌ಗಳ ಜೊತೆಗೆ ವಾಗ್ವಾದ ನಡೆಸಿದರು. ಮ್ಯಾಥ್ಯೂಸ್ ಅವರು ಬಾಂಗ್ಲಾ ತಂಡದ ನಾಯಕ ಶಕೀಬ್ ಅಲ್ ಹಸನ್ ಅವರೊಂದಿಗೆ ಕೂಡ ಮಾತುಕತೆ ನಡೆಸಿದರು. ತಮ್ಮ ಹೆಲ್ಮೆಟ್‌ನ ಪಟ್ಟಿ ಕಿತ್ತಿರುವುದನ್ನು ತೋರಿಸಿದರು. ಆದರೆ ಯಾವುದೂ ಫಲ ಕೊಡಲಿಲ್ಲ.

    ಅಸಮಾಧಾನದಿಂದ ಕುದಿಯುತ್ತಲೇ ಮ್ಯಾಥ್ಯೂಸ್ ಹೊರನಡೆದರು. ಲಂಕಾ ತಂಡದ ಮೊತ್ತ 135 ರನ್‌ಗಳಿಗೆ ಐದು ವಿಕೆಟ್ ಕಳೆದುಕೊಂಡಿತು. ನಿಯಮದ ಪ್ರಕಾರಣ ಟೈಮ್‌ ಔಟ್ ವಿಕೆಟ್‌ ಅನ್ನು ಯಾವುದೇ ಬೌಲರ್‌ಗಳ ಖಾತೆಗೂ ಸೇರ್ಪಡೆ ಮಾಡಲಿಲ್ಲ. ಇಂತದೊಂದು ಘಟನೆಯು ದೇಶಿ ಕ್ರಿಕೆಟ್‌ನಲ್ಲಿ ದಾಖಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    Glenn Maxwell: ನಿವೃತ್ತಿ ಘೋಷಿಸಿದ ಗ್ಲೆನ್ ಮ್ಯಾಕ್ಸ್ವೆಲ್: ಕೊನೆಗೂ ಕಾರಣ ಬಿಚ್ಚಿಟ್ಟ ಆಸ್ಟ್ರೇಲಿಯಾ ಆಲ್‌ ರೌಂಡರ್!

    June 7, 2025

    Bengaluru Stampede Case: ನೈತಿಕ ಹೊಣೆ ಹೊತ್ತು KSCA ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ..!

    June 7, 2025

    KL Rahul: ಇಂಗ್ಲೆಂಡ್ ಲಯನ್ಸ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ಕನ್ನಡಿಗ ಕೆಎಲ್ ರಾಹುಲ್..!

    June 7, 2025

    ಚಿನ್ನಸ್ವಾಮಿ ಭೀಕರ ಕಾಲ್ತುಳಿತ ಕೇಸ್: CID ತನಿಖೆ ಇಂದಿನಿಂದ ಶುರು!

    June 7, 2025

    ಕಾಲ್ತುಳಿತ ಕೇಸ್: RCB ವಿಜಯೋತ್ಸವಕ್ಕೆ 19 ಷರತ್ತು ವಿಧಿಸಿದ್ದ ರಾಜ್ಯ ಸರ್ಕಾರ!

    June 7, 2025

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಆರ್ ಸಿಬಿಗೆ ಮತ್ತೆ ಆಘಾತ: ಬೆಂಗಳೂರಿನಲ್ಲಿ ಮತ್ತೊಂದು FIR ದಾಖಲು!

    June 6, 2025

    ನೂಕು ನುಗ್ಗಲಿಗೆ ಕೊಹ್ಲಿ ಕಾರಣ: ಬೆಂಗಳೂರಿನಲ್ಲಿ ವಿರಾಟ್ ವಿರುದ್ಧ ದೂರು ದಾಖಲು!

    June 6, 2025

    Chinnaswamy Stampede: KSCA ವಿರುದ್ಧ ಬಲವಂತದ ಕ್ರಮ ಬೇಡ – ಬಿಗ್ ರಿಲೀಫ್ ನೀಡಿದ ಹೈಕೋರ್ಟ್!

    June 6, 2025

    ಬೆಂಗಳೂರಿನ ಕಾಲ್ತುಳಿತ ಪ್ರಕರಣ: ಭಾರೀ ಟ್ರೆಂಡಿಂಗ್ ನಲ್ಲಿದೆ #ArrestKohli..!

    June 6, 2025

    RCB Victory Parade Stampede: ನಿಖಿಲ್ ಸೋಸಲೆ ಯಾರು?.. ಅವರಿಗೂ RCBಗೂ ಏನು ಸಂಬಂಧ?

    June 6, 2025

    RCB Stampede: ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: RCB ವಿರುದ್ಧ ಪ್ರಕರಣ ದಾಖಲು!

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.