Close Menu
Ain Live News
    Facebook X (Twitter) Instagram YouTube
    Thursday, May 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    HDD Order: ಪಕ್ಷದಿಂದಲೇ ಸಿಎಂ ಇಬ್ರಾಹಿಂ ಅಮಾನತು: ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರ ಆದೇಶ

    By AIN AuthorNovember 18, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಸಿಎಂ ಇಬ್ರಾಹಿಂ (CM Ibrahim) ಅವರನ್ನು ಜೆಡಿಎಸ್‌ ಪಕ್ಷದಿಂದಲೇ ಅಮಾನತುಗೊಳಿಸಿರುವುದಾಗಿ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು (HD DeveGowda) ಆದೇಶ ಹೊರಡಿಸಿದ್ದಾರೆ.

    ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ದೊಡ್ಡಗೌಡರು ಈ ಆದೇಶ ಹೊರಡಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ (BJP-JDS Alliance) ವಿಚಾರದಲ್ಲಿ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದ್ದರೂ ತಾನೇ ರಾಜ್ಯಾಧ್ಯಕ್ಷ ಎಂದು ಹೇಳಿಕೊಂಡು ಪ್ರತ್ಯೇಕ ಸಭೆ ನಡೆಸಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದಾಗಿ ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.

    ಅಮಾನತು ಹಿನ್ನೆಲೆ:

    ಪಕ್ಷದ ಹಿತಕ್ಕಾಗಿ ಬಿಜೆಪಿ ಜತೆ ಲೋಕಸಭೆ ಚುನಾವಣೆಗಾಗಿ ಮೈತ್ರಿ ಮಾಡಿಕೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಸರ್ವಾನುಮತದ ಅಧಿಕಾರ ನೀಡಲಾಗಿತ್ತು ಹಾಗೂ ಮೈತ್ರಿಯ ಬಗ್ಗೆ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಲು ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕಾಂಗ ಪಕ್ಷದ ನಾಯಕರಿಗೆ ಪೂರ್ಣ ಅಧಿಕಾರ ನೀಡಲಾಗಿತ್ತು. ಈ ಬಗ್ಗೆ ನಿರ್ಣಯ ಕೈಗೊಳ್ಳಲು ನಡೆದ ಎಲ್ಲಾ ಸಭೆಗಳಲ್ಲಿ ಇಬ್ರಾಹಿಂ ಅವರು ಹಾಜರಿದ್ದರು. ಆದರೂ ಅವರು ಪಕ್ಷಕ್ಕೆ ಹಾನಿ ಉಂಟು ಮಾಡುವ ವಿರೋಧಾಭಾಸದ ಹೇಳಿಕೆಗಳನ್ನು ನೀಡಿರುತ್ತಾರೆ.

    ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಜನತಾದಳದ ರಾಜ್ಯಾಧ್ಯಕ್ಷರನ್ನು ಒಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಪಕ್ಷದ ಸಂವಿಧಾನದ ಆರ್ಟಿಕಲ್‌ 10ರ ಅನ್ವಯ ಕಳೆದ ಅಕ್ಟೋಬರ್‌ 19ರಂದು ವಿಸರ್ಜನೆ ಮಾಡಿ ರಾಷ್ಟ್ರೀಯ ಅಧ್ಯಕ್ಷರು ಆದೇಶ ಹೊರಡಿಸಿದ್ದರು.

    ತದ ನಂತರ ಇಬ್ರಾಹಿಂದ ಅವರು ನವೆಂಬರ್‌ 7ರಂದು ʼಚಿಂತನ ಮಂಥನʼ ಎನ್ನುವ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಮಾನಾಂತರ ಸಭೆ ಕರೆದು ಜೆಡಿಎಸ್-ಬಿಜೆಪಿ ಮೈತ್ರಿಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡಿ ಸುಳ್ಳು ಆರೋಪಗಳನ್ನು ಮಾಡಿದ್ದರು.

    ನವೆಂಬರ್‌ 7ರಂದು ನೀಡಿದ ಹೇಳಿಕೆಯಲ್ಲಿ, ನಾನಿನ್ನೂ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಮುಂದುವರಿದಿದ್ದೇನೆ ಎಂದು ತಿಳಿಸಿ, ಬಿಜೆಪಿ ಜತೆ ಮೈತ್ರಿಗೆ ಒಲವು ಇರುವವರೆಲ್ಲರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಪಕ್ಷ ವಿರೋಧಿ ಹೇಳಿಕೆಯನ್ನೂ ನೀಡಿರುತ್ತಾರೆ.

    ನವೆಂಬರ್‌ 15ರಂದು ಕೇರಳದ ತಿರುವನಂತಪುರದಲ್ಲಿ ಸಿ.ಕೆ.ನಾನು ಅವರ ನೇತೃತ್ವದಲ್ಲಿ ಪಕ್ಷ ವಿರೋಧಿ ಸಭೆಯನ್ನು ನಡೆಸಿ, ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುತ್ತಾರೆ. ಇವೆಲ್ಲಾ ನಡವಳಿಕೆ, ಹೇಳಿಕೆಗಳ ಹಿನ್ನೆಲೆಯಲ್ಲಿ ಸಿಎಂ ಇಬ್ರಾಹಿಂ ಅವರು ಪಕ್ಷದ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷರು ತಿಳಿಸಿದ್ದಾರೆ.

     

    Demo
    Share. Facebook Twitter LinkedIn Email WhatsApp

    Related Posts

    Booker Prize winner: ಬೂಕರ್‌ ವಿಜೇತ ಕನ್ನಡತಿಯರಿಗೆ ತಾಯ್ನಾಡಿನಲ್ಲಿ ಭವ್ಯ ಸ್ವಾಗತ

    May 28, 2025

    ಕೊಲೆ ಆರೋಪಿ ದರ್ಶನ್‌ ವೀಸಾ ವಿಷಯ..ಇವತ್ತು ಕೋರ್ಟ್‌ನಲ್ಲಿ ಏನೇನಾಯ್ತು?

    May 28, 2025

    ದೇಶದಲ್ಲೇ ಬೆಂಗಳೂರಿನಲ್ಲಿ ಮಾತ್ರ ಎರಡು ಬಗೆಯ ತೆರಿಗೆ, ಇದು ಅನಾಗರಿಕ: ಆರ್‌.ಅಶೋಕ್‌ ಕಿಡಿ

    May 28, 2025

    ಕಮಲ್ ಹಾಸನ್ ಆ ಕೆಲಸ ಮಾಡದಿದ್ರೆ ಮುಲಾಜಿಲ್ಲದೇ ಬ್ಯಾನ್ ಮಾಡಬೇಕು: ಶಿವರಾಜ್ ತಂಗಡಗಿ!

    May 28, 2025

    ಯತ್ನಾಳ್ ಯಾರು ಅಂತನೇ ಗೊತ್ತಿಲ್ಲವಂತೆ: ರಾಧಾ ಮೋಹನ ದಾಸ್ ಅಗರವಾಲ್ ವ್ಯಂಗ್ಯ !

    May 28, 2025

    ಬೆಂಗಳೂರಿನಲ್ಲಿ ಟೋಯಿಂಗ್ ಶುರು!? ಸರ್ಕಾರದ ನಡೆಗೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ!

    May 28, 2025

    ಸೈಟ್ ರಿಜಿಸ್ಟರ್ ಆಗದೇ ಪರದಾಡುತ್ತಿದ್ದೀರಾ!? ನಿಮಗಿಲ್ಲಿದೆ ಗುಡ್ ನ್ಯೂಸ್!

    May 28, 2025

    ಕರ್ನಾಟಕದಲ್ಲಿ ಭಾರೀ ಮಳೆ: ಶುಕ್ರವಾರ, ಶನಿವಾರ DC , CEO ಸಭೆ ಕರೆದ ಸಿಎಂ!

    May 28, 2025

    ಕಮಲ್‌ ಹಾಸನ್‌ ಹೊಗಳುತ್ತಲೇ ಡಿಚ್ಚಿ ಕೊಟ್ಟ ನವರಸ ನಾಯಕ ಜಗ್ಗೇಶ್!‌

    May 28, 2025

    ಕಮಲ್ ಹಾಸನ್ ಸಾಂಸಾರಿಕ ಜೀವನ, ರಾಜಕೀಯ ಜೀವನ ಸರಿಯಿಲ್ಲ. ಎಲ್ಲದ್ರಲ್ಲಿಯೂ ಎಕ್ಕುಟ್ಟೋಗಿದ್ದಾರೆ: ಪ್ರವೀಣ್ ಶೆಟ್ಟಿ

    May 28, 2025

    ಕೌಟುಂಬಿಕ ಕಲಹ: ಹೆಂಡತಿ ಕೊಲೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ

    May 28, 2025

    ಕಾಂಗ್ರೆಸ್‌ ನಿಂದ ಸೈನಿಕರಿಗೆ ʻಜೈಹಿಂದ್‌ʼ ಗೌರವ: photos

    May 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.