Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹು-ಧಾ ಪೊಲೀಸರ ಕಾರ್ಯಚರಣೆ: ರೌಡಿಶೀಟರ್ ಮನೆಗಳ ಮೇಲೆ ದಿಢೀರ್ ದಾಳಿ

    By AIN AuthorNovember 22, 2023
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಕಮೀಷನರೇಟ್ ವತಿಯಿಂದ ಅವಳಿನಗರದಲ್ಲಿ ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

    ಈಗಾಗಲೇ ಜೂಜಾಟ, ಕ್ರಿಕೆಟ್ ಬೆಟ್ಟಿಂಗ್, ಓಸಿ ಮಟ್ಕಾ, ಅಕ್ರಮ ಮದ್ಯ ಮಾರಾಟ ಮಾಡುವವರ ಮೇಲೆ ಪ್ರಕರಣಗಳನ್ನು ದಾಖಲು ಮಾಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ. ಇವುಗಳಲ್ಲದೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ರೌಡಿಶೀಟರ್ ಮನೆಗಳ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಅನಿರೀಕ್ಷಿತ ದಾಳಿ ನಡೆಸುವ ಮೂಲಕ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು, ಉತ್ತರ, ದಕ್ಷಿಣ ಹಾಗೂ ಧಾರವಾಡ ಉಪವಿಭಾಗಗಳ ವ್ಯಾಪ್ತಿಯಲ್ಲಿ ಒಟ್ಟು 172 ರೌಡಿಶೀಟರ್ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದು,

    ಅಪರಾಧ ಕೃತ್ಯಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಗಿದೆ. ದಾಳಿ ವೇಳೆ ಬೆಂಡಿಗೇರಿ ಪೊಲೀಸ್ ಠಾಣೆಯ ರೌಡಿಶೀಟರಾದ ಷಣ್ಮುಗ ರವೀಂದ್ರ ಗುಡಿಹಾಳ ಎಂಬುವವನ ಮನೆಯಲ್ಲಿ ಮಾರಕಾಸ್ತ್ರಗಳು ದೊರೆತಿದ್ದು, ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿರುತ್ತದೆ. ಒಟ್ಟು 05 ರೌಡಿಶೀಟರ್‌ಗಳ ಮೇಲೆ ಸಿಆರ್‌ಪಿಸಿ ಕಾಯ್ದೆಯಡಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿರುತ್ತದೆ.

    ಇನ್ನೂ ವಿವಿಧ ಪ್ರಕರಣಗಳಲ್ಲಿ ವಾರಂಟ್ ಜಾರಿಯಾಗಿದ್ದರೂ ತಲೆ ಮರೆಸಿಕೊಂಡಿದ್ದ 03 ಜನ ರೌಡಿಶೀಟರ್‌ಗಳು ಸಿಕ್ಕಿಬಿದ್ದಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ. ಹುಬ್ಬಳ್ಳಿ ಧಾರವಾಡ ನಗರದಲ್ಲಿ ಯಾವುದೇ ರೀತಿಯ ರೌಡಿಸಂ-ಪುಂಡಾಟ ಚಟುವಟಿಕೆಗಳಿಗೆ ಅವಕಾಶವಿಲ್ಲ (Zero tolerance) ಎಂಬುದನ್ನು ಈ ಮೂಲಕ ತಿಳಿಸಿದ್ದು, ಒಂದು ವೇಳೆ ಅಂತಹ ಚಟುವಟಿಕೆಗಳು ಕಂಡುಬಂದಲ್ಲಿ ಅವರುಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

    June 8, 2025

    ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಸರ್ಕಾರ ಮಾಡಬೇಕು: ಬಸವರಾಜ ಹೊರಟ್ಟಿ!

    June 7, 2025

    ಚಿನ್ನಸ್ವಾಮಿ ದುರಂತ: ಸಿದ್ದರಾಮಯ್ಯ ಸೇರಿ ನಮಗೆಲ್ಲಾ ತುಂಬಾ ನೋವಾಗಿದೆ- ಎಂ.ಸಿ ಸುಧಾಕರ್!

    June 7, 2025

    ಕೌಟುಂಬಿಕ ಜಗಳ: ಚಿಕ್ಕಪ್ಪನಿಂದಲೇ ಅಣ್ಣನ ಮಗನ ಬರ್ಬರ ಹತ್ಯೆ!

    June 7, 2025

    ಸವದತ್ತಿಯಲ್ಲಿ ಮಳೆ ಆರ್ಭಟ: ನದಿಯಂತಾದ ರಸ್ತೆಗಳು.. ಜನಜೀವನ ಅಸ್ತವ್ಯಸ್ತ!

    June 7, 2025

    Mandya: ಕಳ್ಳತನಕ್ಕೆ ಯತ್ನಿಸಿ ಕೊನೆ ಕ್ಷಣದಲ್ಲಿ ಕೈಮುಗಿದು ತೆರಳಿದ ಮುಸುಕುಧಾರಿ!

    June 7, 2025

    ಸಬ್ ಇನ್ಸ್ ಪೆಕ್ಟರ್ ಸಮಯಪ್ರಜ್ಞೆ: ಬೆಂಕಿ ಅನಾಹುತದಿಂದ ಪಾರಾದ ರೈತ ಕುಟುಂಬ!

    June 7, 2025

    ಚಾಮರಾಜನಗರ: ಜಿಲ್ಲೆಯಾದ್ಯಂತ ಸಡಗರ ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

    June 7, 2025

    ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಕಾರು ಪಲ್ಟಿ: ಇಬ್ಬರಿಗೆ ಗಾಯ

    June 7, 2025

    ತುಂಬು ಗರ್ಭೀಣಿ ಅನುಮಾನಾಸ್ಪದ ಸಾವು: ಮಂಡ್ಯದ ಮದ್ದೂರಿನಲ್ಲಿ ಹೃದಯ ವಿದ್ರಾವಕ ಘಟನೆ

    June 7, 2025

    ಪ್ರತಿ ಪಂಚಾಯಿತಿ ಮಟ್ಟದಲ್ಲಿ ಉಚಿತ ಇಂಗ್ಲೀಷ್ ಶಾಲೆ ತೆರೆಯಬೇಕು ಅಂತ ಯೋಚಿಸಿದ್ದೇನೆ: ಹೆಚ್.ಡಿ ಕುಮಾರಸ್ವಾಮಿ

    June 7, 2025

    ನೆಲಮಂಗಲ ಯುವಕನ ಕೊಲೆ ಪ್ರಕರಣ: ದೊಡ್ಡಬಳ್ಳಾಪುರದಲ್ಲಿ ಎಸ್ಪಿ ಸಿಕೆ ಬಾಬಾ ಹೇಳಿದ್ದೇನು..?

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.