Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Fathima Beevi: ಸುಪ್ರೀಂ ಕೋರ್ಟ್ʼನ ಮೊದಲ ಮಹಿಳಾ ನ್ಯಾಯಮೂರ್ತಿ ಫಾತಿಮಾ ಬೀವಿ ನಿಧನ

    By AIN AuthorNovember 23, 2023
    Share
    Facebook Twitter LinkedIn Pinterest Email
    Demo

    ತಿರುವನಂತಪುರಂ: ಸುಪ್ರೀಂ ಕೋರ್ಟ್‌ ಮಾಜಿ ಜಡ್ಜ್‌  ಫಾತೀಮಾ ಬೀವಿ ಗುರುವಾರ ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು ಎಂದು ಏಷ್ಯಾನೆಟ್‌ ನ್ಯೂಸ್‌ ಮಲಯಾಳಂ ವರದಿ ಮಾಡಿದೆ. ಫಾತಿಮಾ ಬೀವಿ ಅವರು ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶರಾಗಿದ್ದರು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಸದಸ್ಯೆಯೂ ಆಗಿದ್ದ ಫಾತಿಮಾ ಬೀವಿ, ಅವರು 1997-2001ರವರೆಗೆ ತಮಿಳುನಾಡಿನ ರಾಜ್ಯಪಾಲರಾಗಿದ್ದರು.

    ದೇಶದ ಉನ್ನತ ನ್ಯಾಯಾಂಗಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ಮಹಿಳೆಯೂ ಆಗಿದ್ದರು. 1927 ರಲ್ಲಿ ಕೇರಳದಲ್ಲಿ ಜನಿಸಿದ್ದ ಫಾತೀಮಾ ಬೀವಿಗೆ ಅವರ ತಂದೆ ಕಾನೂನು ವಿದ್ಯಾಭ್ಯಾಸ ಮಾಡಲು ಪ್ರೋತ್ಸಾಹ ನೀಡಿದ್ದರು. 1950 ರಲ್ಲಿ, ಬಾರ್ ಕೌನ್ಸಿಲ್ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ಇವರು,  ಬಾರ್ ಕೌನ್ಸಿಲ್ ಚಿನ್ನದ ಪದಕವನ್ನು ಪಡೆದ ಮೊದಲ ಮಹಿಳೆ ಎನಿಸಿಕೊಂಡಿದ್ದರು.

    Kambala: ಬೆಂಗಳೂರಲ್ಲಿ ಅದ್ದೂರಿಯಾಗಿ ನ. 25, 26ರಂದು ನಡೆಯಲಿರುವ ನಮ್ಮ‌ ಕಂಬಳ: ಹೇಗಿದೆ ಸಿದ್ಧತೆ!

    ಕೇರಳದಲ್ಲಿ ವಕೀಲರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದ ಫಾತೀಮಾ ಬೀವಿ, 1974 ರಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದರು. 1980 ರಲ್ಲಿ ಅವರು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಸೇವೆ ಸಲ್ಲಿಸಿ 1983 ರಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.

    1989ರಲ್ಲಿ ಸುಪ್ರೀಂ ಕೋರ್ಟ್‌ಗೆ ನೇಮಕಗೊಂಡ ಮೊದಲ ಮಹಿಳಾ ಜಡ್ಜ್‌ ಎನ್ನುವ ಶ್ರೇಯಕ್ಕೆ ಪಾತ್ರರಾದರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ, ಅವರು ಉನ್ನತ ನ್ಯಾಯಾಂಗದಲ್ಲಿ ಮೊದಲ ಮುಸ್ಲಿಂ ಮಹಿಳೆ ಮತ್ತು ಏಷ್ಯಾದ ದೇಶದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾದ ಮೊದಲ ಮಹಿಳೆ ಎನಿಸಿಕೊಂಡಿದ್ದರು. 1993 ರಲ್ಲಿ ನಿವೃತ್ತರಾದ ನಂತರ, ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಮತ್ತು ನಂತರ ತಮಿಳುನಾಡಿನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.

    Demo
    Share. Facebook Twitter LinkedIn Email WhatsApp

    Related Posts

    11 ವರ್ಷ ಪೂರೈಸಿದ ಕೇಂದ್ರ ಸರ್ಕಾರ: ನಮ್ಮ ಯೋಜನೆಗಳು ಮಹಿಳೆಯರ ಜೀವನದಲ್ಲಿ ದೊಡ್ಡ ಬದಲಾವಣೆ ತಂದಿದೆ – ಮೋದಿ!

    June 8, 2025

    ನಾಲ್ವರು ಕಾಮುಕರಿಂದ ಇಬ್ಬರು ಅಪ್ರಾಪ್ತೆಯರ ಮೇಲೆ ಗ್ಯಾಂಗ್ ರೇಪ್!

    June 8, 2025

    ಅನಾರೋಗ್ಯ ಸಮಸ್ಯೆ: ದಿಢೀರ್ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ!

    June 7, 2025

    Delhi CM: ದೆಹಲಿ ಸಿಎಂಗೆ ಬೆದರಿಕೆ: 25 ವರ್ಷದ ಯುವಕನ ಬಂಧನ

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    Rs 500 Currency Notes: ಶೀಘ್ರದಲ್ಲೇ 500 ರೂ. ನೋಟುಗಳನ್ನು ಬ್ಯಾನ್ ಆಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು..?

    June 7, 2025

    Corona Virus: ದೇಶದಲ್ಲಿ ಇಂದು 391 ಮಂದಿಗೆ ಕೊರೋನಾ ಸೋಂಕು..! ಸಾವಿನ ಸಂಖ್ಯೆ ಎಷ್ಟು ಗೊತ್ತಾ..?

    June 7, 2025

    Bijapur Encounter: ರಾಷ್ಟ್ರೀಯ ಉದ್ಯಾನವನದಲ್ಲಿ ಗುಂಡಿನ ಚಕಮಕಿ: ಇಬ್ಬರು ಮಾವೋವಾದಿಗಳ ಹತ್ಯೆ.!

    June 7, 2025

    RCB ಖರೀದಿಸಲು ಅದೊಂದೇ ಕಾರಣ.. ಹೊರತು ಕ್ರಿಕೆಟ್ ಮೇಲಿನ ಪ್ರೀತಿಯಿಂದಲ್ಲ: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ!

    June 6, 2025

    ಜಾಮೀನು ರದ್ದು ಮಾಡಿದ ಸುಪ್ರೀಂ: ಮತ್ತೆ ಜೈಲು ಸೇರ್ತಾರಾ ವಿನಯ್ ಕುಲಕರ್ಣಿ!?

    June 6, 2025

    PM Modi: ಪಾಕಿಸ್ತಾನ ಮಾನವೀಯತೆಯ ಮೇಲೆ ದಾಳಿ ಮಾಡಿದೆ: ಪ್ರಧಾನಿ ಮೋದಿ

    June 6, 2025

    Chenab Bridge: ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದ ಪ್ರಧಾನಿ ಮೋದಿ..!

    June 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.