Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಚರ್ಮ ಕುಶಲಕರ್ಮಿಗಳ ಕುಟುಂಬಕ್ಕೆ ಡಾಲಿ ಸಾಥ್: ಲಿಡ್ಕರ್ ರಾಯಭಾರಿಯಾದ ಧನಂಜಯ

    By AIN AuthorNovember 23, 2023
    Share
    Facebook Twitter LinkedIn Pinterest Email
    Demo

    ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನ ಆಯ್ಕೆ ಮಾಡಿದೆ…ನಟ‌ರಾಕ್ಷಸ ಡಾಲಿ ಧನಂಜಯ್ ಲಿಡ್ಕರ್ ಗೆ ರಾಯಭಾರಿಯಾಗಿದ್ದಾರೆ. ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡುತ್ತಿದ್ದಾರೆ.

    ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ. ಚರ್ಮ ಕೈಗಾರಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸರ್ಕಾರ ಸ್ಯಾಂಡಲ್‌ವುಡ್ ಸ್ಟಾರ್ ಧನಂಜಯ್ ಅವರನ್ನು ರಾಯಾಭಾರಿಯಾಗಿ ನೇಮಕಮಾಡಿದೆ. ಈಗಾಗಲೇ ಡಾಲಿ ಜೊತೆ ಮಾತುಕತೆಯಾಗಿದ್ದು ಧನಂಜಯ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಧಿಕೃತ ಪ್ರಕಟಣೆಯೊಂದೆ ಬಾಕಿ ಇದೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲಿಡ್ಕರ್ ವ್ಯವಸ್ಥಾಪಕ ನಿರ್ದೇಶಕಿ ಕೆ.ಎಂ.ಎಸ್ ವಸುಂಧರಾ, ಧನಂಜಯ್ ಅವರು ರಾಯಭಾರಿಯಾಗಿದ್ದು ತುಂಬಾ ಖುಷಿ ಇದೆ. ಅವರು ಸ್ಯಾಂಡಲ್‌ವುಡ್‌ನ ಲೀಡಿಂಗ್ ನಟ ಎಲ್ಲಾ ವರ್ಗದ ಜನರಿಗೆ ತಲುಪುವ ಕಲಾವಿದ ಹಾಗಾಗಿ ಅವರನ್ನ ಆಯ್ಕೆ ಮಾಡಿದ್ದೇವೆ ಸಚಿವರು ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದು ಆದಷ್ಟು ಬೇಗ ಜಾಹೀರಾತಿನ ಚಿತ್ರೀಕರಣ ನಡೆಯಲಿದೆ ಎಂದಿದ್ದಾರೆ

    ಧನಂಜಯ ಸದ್ಯ ಸಾಲು ಸಾಲು ಸಿನಿಮಾಗಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಧನಂಜಯ್ ತಮ್ಮದೇ ಡಾಲಿ ಸಂಸ್ಥೆ ನಿರ್ಮಾಣದ ‘ಟಗರು ಪಲ್ಯ’ ಸಿನಿಮಾ ರಿಲೀಸ್ ಮಾಡಿದ್ದರು. ಟಗರು ಪಲ್ಯ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿರ್ಮಾಣದ ಜೊತೆಗೆ ಡಾಲಿ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಪುಷ್ಪ-2 ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ ಈ ನಡುವೆ ಜಾಹೀರಾತು ಲೋಕಕ್ಕೆ ಡಾಲಿ ಲಗ್ಗೆ ಇಟ್ಟಿರುವುದು ಅವರ ಅಭಿಮಾನಿ ಬಳಗಕ್ಕೆ ಸಂತಸ ತಂದಿದೆ .

    Demo
    Share. Facebook Twitter LinkedIn Email WhatsApp

    Related Posts

    ಅಮೆರಿಕಾದಲ್ಲಿ ಶಿವಣ್ಣನ ಜೀವನಚರಿತ್ರೆ ಪುಸ್ತಕ ಬಿಡುಗಡೆ..ಹಾಡು ಹೇಳಿ‌ ಶಿವಪಡೆ ರಂಜಿಸಿದ ಭಜರಂಗಿ..Video ವೈರಲ್!‌

    June 9, 2025

    ನನ್ನ ಮಗ ಇಲ್ಲದೇ ಜೀವನ ಕಷ್ಟವಾಗಿದೆ, ಸೊಸೆಗೆ ಸರ್ಕಾರಿ ಕೆಲಸ ಕೊಡಿ: ಸರ್ಕಾರಕ್ಕೆ ರೇಣುಕಾಸ್ವಾಮಿ ತಾಯಿ ಮನವಿ!

    June 8, 2025

    ರಾಜಮೌಳಿ ಸಿನಿಮಾಕ್ಕೆ ನೋ ಎಂದಿದ್ರಂತೆ ಬಾಲಿವುಡ್ ನಟ.. ಯಾರವರು?

    June 8, 2025

    ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು: ನಟ ಮಡೆನೂರು ಮನು

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಅಧಿಕಾರಿಗಳ ತಲೆದಂಡ ಕುರಿತು ನಟಿ ರಮ್ಯಾ ಹೇಳಿದ್ದೇನು..?

    June 7, 2025

    ಅಟ್ಲಿ-ಅಲ್ಲು ಅರ್ಜುನ್ ಚಿತ್ರಕ್ಕೆ ದೀಪಿಕಾ ಪಡುಕೋಣೆ ನಾಯಕಿ: 700 ಕೋಟಿ ರೂ. ಬಜೆಟ್‌ನಲ್ಲಿ ಸಿದ್ಧವಾಗಲಿದೆ ಮೆಗಾ ಮೂವಿ!

    June 7, 2025

    Lal Salaam: OTT ಗೆ ಲಗ್ಗೆ ಇಟ್ಟ ರಜನಿಕಾಂತ್ ಅಭಿನಯದ ‘ಲಾಲ್ ಸಲಾಂ’ ಸಿನಿಮಾ..!

    June 6, 2025

    ರಸ್ತೆ ಅಪಘಾತದಲ್ಲಿ ತಂದೆ ಸಾವು: ಮಲಯಾಳಂ ಖ್ಯಾತ ನಟ ಟಾಮ್ ಚಾಕೊ ಆಸ್ಪತ್ರೆಯಲ್ಲಿ!

    June 6, 2025

    ಚಿನ್ನಸ್ವಾಮಿ ಘಟನೆಯನ್ನು ಕಣ್ಣಾರೆ ಕಂಡಿದ್ದೇನೆ: ಚಂದನ್ ಶೆಟ್ಟಿ!

    June 5, 2025

    ಹೈಕೋರ್ಟ್‌ ಚಾಟಿಗೆ ಬಗ್ಗದ ದುರಂಕಾರಿ ಕಮಲ್‌ ಹಾಸನ್..ಮತ್ತೆ ಧಿಮಾಕಿನ ಮಾತನಾಡಿದ ತಮಿಳು ನಟ!

    June 4, 2025

    RCB ಕನಸು ನನಸು..ಚಿಕ್ಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ KGF ಪ್ರಶಾಂತ್‌ ನೀಲ್‌ Video ವೈರಲ್!‌

    June 4, 2025

    ಪ್ರಭಾಸ್ ನಟನೆಯ ʼದಿ ರಾಜಾ ಸಾಬ್ʼ ಬಿಡುಗಡೆ ದಿನಾಂಕ ನಿಗದಿ!

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.