Close Menu
Ain Live News
    Facebook X (Twitter) Instagram YouTube
    Thursday, June 12
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Bengaluru kambala: ಬೆಂಗಳೂರು ಕಂಬಳಕ್ಕೆ ಹೋದ್ರೆ ಇದರ ಬಗ್ಗೆ ತಿಳಿಯಿರಿ

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು :– ರಾಜಕಾರಣಿಗಳು, ಸಿನಿಮಾ ನಟರು ಮತ್ತು ಕಂಬಳ ಅಭಿಮಾನಿಗಳು, ಕುತೂಹಲಿಗಳು ಸೇರಿ ಎರಡು ದಿನದಲ್ಲಿ ಆರರಿಂದ ಏಳು ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಇಷ್ಟು ಜನರಿಗೆ ಅನುಕೂಲವಾಗುವಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ.

    ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳಕ್ಕೆ ಬರುವವರಿಗಾಗಿ ಸಂಚಾರಿ ಪೊಲೀಸರು ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.

    ಪ್ರವೇಶ ಮತ್ತು ವಾಹನ ನಿಲುಗಡೆ ಸ್ಥಳಗಳು

    ಸಿಬಿಡಿ ಏರಿಯಾದಿಂದ ಬರುವ ವಾಹನಗಳಿಗೆ ಮೇಖ್ರಿ ಸರ್ಕಲ್ ಬಳಿಯ ಗೇಟ್ ನಂ 1(ಕೃಷ್ಣ ವಿಹಾರ್) ನಲ್ಲಿ ಪ್ರವೇಶದ ಪಾರ್ಕಿಂಗ್.

    ಹೆಬ್ಬಾಳ ಕಡೆಯಿಂದ ಬರುವ ವಾಹನಗಳಿಗೆ ಮೇಖ್ರಿ ಸರ್ಕಲ್ ಅಂಡರ್ ಪಾಸ್ ಮೂಲಕ ಗೇಟ್ ನಂ.1ರಿಂದ ಪ್ರವೇಶ.

    ಯಶವಂತಪುರ ಕಡೆ ಬರುವ ವಾಹನಗಳು ಮೇಖ್ರಿ ಸರ್ಕಲ್ ಬಳಿ ಬಲ ತಿರುವು ಗೇಟ್ ನಂಬರ್ 1ರಲ್ಲಿ ಪ್ರವೇಶ.

    ಕ್ಯಾಬ್‌ನಲ್ಲಿ ಬರುವವರು ಗೇಟ್ ನಂಬರ್ 2ರ ಮೂಲಕ ಪ್ರವೇಶ. ಗೇಟ್ ನಂಬರ್ 3ರ ಮೂಲಕ ಕ್ಯಾಬ್‌ಗಳಿಗೆ ಎಕ್ಸಿಟ್‌ಗೆ ಸೂಚನೆ ನೀಡಲಾಗಿದೆ.

    ಇತರೆ ವಾಹನಗಳು ವಾಪಸ್ ಹೋಗುವಾಗ ಜಯಮಹಲ್ ರಸ್ತೆಯ ಅಮಾನುಲ್ಲಾ ಖಾನ್ ಗೇಟ್ ಮೂಲಕ ನಿರ್ಗಮಿಸಬೇಕು.
    ಕಾರ್ಯಕ್ರಮ ಹೊರತುಪಡಿಸಿ ಸಂಚರಿಸುವ ಸವಾರರಿಗೆ ಪ್ರತ್ಯೇಕ ಮಾರ್ಗಸೂಚಿ ನೀಡಲಾಗಿದ್ದು, ಮೈಸೂರು ಬ್ಯಾಂಕ್ ರಸ್ತೆ ಮೂಲಕ ವಸಂತ್ ನಗರ ಅಂಡರ್ ಪಾಸ್‌ನಲ್ಲಿ ಹೋಗುವವರು ಅರಮನೆ ರಸ್ತೆ ಮೂಲಕವೇ ಸಂಚರಿಸಬೇಕು.

    ವಿವಿಐಪಿ ಎಂಟ್ರಿ ಬೇರೆ, ಸಾರ್ವಜನಿಕರಿಗೆ ಬೇರೆ

    ಅರಮನೆ ಮೈದಾನದ ಗೇಟ್ ನಂಬರ್ 1, 2, 3 ಹಾಗೂ 4 ರಲ್ಲಿ ಸಾರ್ವಜನಿಕರಿಗೆ ಎಂಟ್ರಿ ನೀಡಲಾಗುತ್ತಿದೆ. ಕಂಬಳ ವೀಕ್ಷಿಸಲು ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಇರಲಿದೆ. ವಿವಿಐಪಿಗಳಳಿಗೆ ಫನ್ ವರ್ಲ್ಡ್‌ ಕಡೆಯಿಂದ ಪ್ರವೇಶ ಮಾಡಲು ಅವಕಾಶವಿದೆ.

    ಕಂಬಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿರಲಿದೆ. ಯಾವುದೇ ಟಿಕೆಟ್‌ ಇಲ್ಲದೆ ಉಚಿತವಾಗಿ ಬರಬಹುದು. ಸಾರ್ವಜನಿಕರು ಪಾಸ್‌ ತೋರಿಸುವ ಅಗತ್ಯವೂ ಇಲ್ಲ. ಆದರೆ, ವಿಐಪಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ.

    ಕಂಬಳ ನೋಡಲು ಜನರಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. 6 ರಿಂದ 7 ಸಾವಿರ ಜನರು ಗ್ಯಾಲರಿಯಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು.

    ಕಂಬಳ : ಎಷ್ಟು ಹೊತ್ತಿಗೆ ಯಾವ ಇವೆಂಟ್‌?

    ಕಂಬಳ ಆರು ವಿಭಾಗಗಳಲ್ಲಿ ನಡೆಯಲಿದೆ. ಹಗ್ಗದ ವಿಭಾಗದಲ್ಲಿ ಹಿರಿಯ ಮತ್ತು ಕಿರಿಯ ಎಂಬ ಎರಡು ವರ್ಗಗಳಿವೆ. ನೇಗಿಲು ವಿಭಾಗದಲ್ಲೂ ಹಿರಿಯ ಮತ್ತು ಕಿರಿಯ ವರ್ಗಗಳಿವೆ. ಉಳಿದಂತೆ ಅಡ್ಡಹಲಗೆ ಮತ್ತು ಕನಹಲಗೆ ವಿಭಾಗಗಳಿವೆ.

    ಬೆಳಗ್ಗೆ 10.30ರಿಂದಲೇ ಕೋಣಗಳ ಓಟ ಶುರುವಾಗಲಿದೆ. ಆರಂಭದಲ್ಲಿ ಹಗ್ಗ ಮತ್ತು ನೇಗಿಲಿನ ಕಿರಿಯ ವಿಭಾಗದ ಕೋಣಗಳ ಒಂಟಿ ಓಟವಿರುತ್ತದೆ. ಈ ಕೋಣಗಳು 155 ಮೀಟರ್‌ ಓಡಲು ತೆಗೆದುಕೊಳ್ಳುವ ಸಮಯವನ್ನು ನೋಟ್‌ ಮಾಡಲಾಗುತ್ತದೆ. ಇದು ಅವುಗಳ ನಡುವೆ ಓಟದ ಸ್ಪರ್ಧೆಯನ್ನು ಆಯೋಜಿಸಲು ಅನುಕೂಲವಾಗುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    BIG BREAKING.. ಅಹಮದಾಬಾದ್’ನಲ್ಲಿ ವಿಮಾನ ಪತನ: ಆಕಾಶದಲ್ಲಿ ಬೆಂಕಿಯ ಜ್ವಾಲೆ! Video ವೈರಲ್!

    June 12, 2025

    ರೋಹಿಣಿ ಸಿಂಧೂರಿ ಸಹಿತ ಮೂವರು IAS ಅಧಿಕಾರಿಗಳು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

    June 12, 2025

    ಕಾಲ್ತುಳಿತ ದುರಂತ: ಮಧ್ಯಪ್ರವೇಶಿಸಿ ನ್ಯಾಯ ದೊರಕಿಸಿಕೊಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್.ಅಶೋಕ್ ಮನವಿ

    June 12, 2025

    ಚಕ್ರವರ್ತಿ ಸೂಲಿಬೆಲೆ ಗಡಿಪಾರಿಗೆ ತಯಾರಿ..? ಸಚಿವ ಪರಮೇಶ್ವರ್ ರಿಯಾಕ್ಷನ್ ಹೀಗಿತ್ತು..!

    June 12, 2025

    Bengaluru Stampede Case: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಎಂಟ್ರಿ – ಸುಮೊಟೊ ಕೇಸ್ ದಾಖಲು

    June 12, 2025

    24 ಗಂಟೆಯಲ್ಲಿ 3 ಸಾವು..! ಸಕ್ರಿಯ ಪ್ರಕರಣಗಳ ಸಂಖ್ಯೆ 7,154 ಕ್ಕೆ ಏರಿಕೆ – ಯಾವ ರಾಜ್ಯದಲ್ಲಿ ಹೆಚ್ಚು? ಕಡಿಮೆ?

    June 12, 2025

    Bangalore: KSRTC ಬಸ್ ಗೆ ಸಿಲುಕಿ ದ್ವಿಚಕ್ರ ವಾಹನ ಸವಾರ ಸಾವು..!

    June 12, 2025

    ನನ್ನ ಲೆವಲ್ ಅಶೋಕ್, ವಿಜಯೇಂದ್ರ ಮಾತ್ರ. ಇವರ ಬಗ್ಗೆ ಮಾತ್ರ ನಾನು ಮಾತಾಡ್ತೇನೆ: ಶಾಸಕ ಪ್ರದೀಪ್ ಈಶ್ವರ್

    June 12, 2025

    BBMP ಅಧಿಕಾರಿಗಳ ನಿರ್ಲಕ್ಷ್ಯ: ಸಾವು ಬದುಕಿನ ಹೋರಾಟದಲ್ಲಿ ಯುವಕ- ಅಂತದ್ದೇನಾಯ್ತು?

    June 12, 2025

    ಕಾರು ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ಪ್ರಶ್ನಿಸಿದ ವೈದ್ಯೆಗೆ ಅವಾಚ್ಯ ಶಬ್ದಗಳಿಂದ ನಿಂದನೆ!

    June 12, 2025

    ಕರ್ನಾಟಕದಲ್ಲಿ ನಾಳೆಯಿಂದ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

    June 12, 2025

    ಕರ್ತವ್ಯ ನಿರತ ಮಹಿಳಾ ಕಾನ್ಸ್ ಟೇಬಲ್ ಗೆ ಬೂಟ್ ಕಾಲಿಂದ ಒದ್ದ ಆರೋಪ: ಹೆಡ್ ಕಾನ್‌ಸ್ಟೇಬಲ್ ವಿರುದ್ಧ ಕೇಸ್ ದಾಖಲು!

    June 12, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.