Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸಂಗೊಳ್ಳಿರಾಯಣ್ಣ ಸೈನಿಕ‌ ಶಾಲೆ, ರಾಕ್ ಗಾರ್ಡನ್ ಗೆ ಸಚಿವ ತಂಗಡಗಿ ಭೇಟಿ: ಪರಿಶೀಲನೆ

    By AIN AuthorDecember 15, 2023
    Share
    Facebook Twitter LinkedIn Pinterest Email
    Demo

    ಬೆಳಗಾವಿ:-ಹಿಂದುಳಿದ‌ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಬೆಳಗಾವಿ ಜಿಲ್ಲೆ‌‌ ಬೈಲಹೊಂಗಲ‌ ತಾಲ್ಲೂಕಿನಲ್ಲಿರುವ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಸೈನಿಕ‌ ಶಾಲೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ‌ಇಲಾಖೆ‌ ಸಚಿವ‌ ಶಿವರಾಜ್ ತಂಗಡಗಿ‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುರುವಾರ ಸ್ಥಳೀಯ ಶಾಸಕ ಮಹಾಂತೇಶ್ ಕೌಜಲಗಿ ಹಾಗೂ ಅಧಿಕಾರಿಗಳೊಂದಿಗೆ ಸೈನಿಕ ಶಾಲೆಗೆ ಭೇಟಿ ನೀಡಿದ‌ ಸಚಿವರು ಶಾಲೆಯಲ್ಲಿನ ಮೂಲಸೌಲಭ್ಯ ಹಾಗೂ ಗುಣಮಟ್ಟದ ಶಿಕ್ಷಣದ ಬಗ್ಗೆ ಮಾಹಿತಿ ಪಡೆದರು.

    ಈ ವೇಳೆ ಸಚಿವರು ಶಾಲೆಯ ಭೋಜನಾಲಯ, ಗ್ರಂಥಾಲಯ, ಶಿಕ್ಷಕರ ವಸತಿ ಗೃಹ, ಆಡಿಟೋರಿಯಂ ಹಾಗೂ ಕೆಲಸಗಾರರು ಉಳಿದುಕೊಳ್ಳಲು ಹೈಟೆಕ್ ವಸತಿ ಗೃಹ, 30ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಿರುವ ಬೃಹತ್ ಒಳಾಂಗಣ ಮತ್ತು ಹೊರಾಂಗಣದಲ್ಲಿ ಬರುವ ಈಜುಕೊಳ, ಹಾರ್ಸ್ ರೈಡಿಂಗ್, ಹಾಕಿ, ಕಬಡ್ಡಿ, ವಾಲಿಬಾಲ್ ಕೋರ್ಟ್ ಗೆ ಭೇಟಿ ನೀಡಿ ಅಲ್ಲಿನ‌ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು.‌

    6ನೇ ತರಗತಿಯಿಂದ 12ನೇ ತರಗತಿವರೆಗೆ ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಅವಕಾಶವಿದ್ದು, ಕೇಂದ್ರ‌ ರಕ್ಷಣಾ ಇಲಾಖೆ‌ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಸುತ್ತದೆ.‌ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.‌ ಇಲ್ಲಿನ ಶಿಕ್ಷಕರಿಗೆ ಮೈಸೂರಿನಲ್ಲಿರುವ ರಿಜೀನಲ್‌ ಕಾಲೇಜ್ ಆಫ್ ಎಜುಕೇಷನ್ ಸಂಸ್ಥೆಯಿಂದ ವಿಶೇಷ ತರಬೇತಿ ಕೊಡಿಸಲಾಗುತ್ತದೆ ಎಂದು ಇಲಾಖಾ ಕಾರ್ಯದರ್ಶಿ ತುಳಸಿ‌ ಮದ್ದಿನೇನಿ ಅವರು ಸಚಿವರಿಗೆ ವಿವರಿಸಿದರು.

    ಬಳಿಕ ಮಾತನಾಡಿದ ಸಚಿವರು, ಗುಣಮಟ್ಟದ ಶಿಕ್ಷಣ ಮುಖ್ಯ. ‌ಶಾಲೆಯಲ್ಲಿ ಯಾವುದೇ ಮೂಲಸೌಲಭ್ಯಕ್ಕೆ ಕೊರತೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.‌ ಅಕ್ಷರದ ಜತೆಗೆ ಶಿಸ್ತು, ಕಠಿನ ಶ್ರಮ, ಏಕತೆ, ದೇಶಾಭಿಮಾನದ ಪಾಠ ಮಾಡಲಾಗುತ್ತದೆ. ಹಲವು ಸಮರ ಕಲೆಗಳನ್ನು ಶಾಲಾ ಹಂತದಲ್ಲಿಯೇ ಕರಗತ ಮಾಡಲಾಗುತ್ತದೆ.

    ಈಜು, ಶೂಟಿಂಗ್‌ ತರಬೇತಿ ಸೈನಿಕ ಶಾಲೆಯಲ್ಲಿ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲೂ ವಿದ್ಯಾರ್ಥಿಗಳನ್ನು ದೈಹಿಕವಾಗಿ, ಮಾನಸಿಕವಾಗಿ, ಸಿದ್ಧಗೊಳಿಸಲು ತರಬೇತಿ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ಇಲ್ಲಿನ‌ ಶಾಲೆಯ ಮೂಲಸೌಕರ್ಯಕ್ಕೆ ಬೇಕಿರುವ ಅನುದಾನ ನೀಡುವ ಬಗ್ಗೆ ಕ್ರಮವಹಿಸ ಲಾಗುವುದು ಎಂದು ಸಚಿವರು ಇದೇ ವೇಳೆ‌ ತಿಳಿಸಿದರು.‌ ಇನ್ನೂ ಸೈನಿಕ ಶಾಲೆಯ ಪಕ್ಕದಲ್ಲಿ 10 ಎಕರೆ ಪ್ರದೇಶದಲ್ಲಿ ಉದ್ಘಾಟನೆಗೆ ಸಿದ್ಧಗೊಂಡಿರುವ ಸಂಗೊಳ್ಳಿ ರಾಯಣ್ಣ ಸಮಗ್ರ ಜೀವನ ಚರಿತ್ರೆ ಸಾರುವ ರಾಕ್ ಗಾರ್ಡನ್ ಗೆ ಸಚಿವರು ಭೇಟಿ ನೀಡಿದರು.‌

    ಈಗಾಗಲೇ‌‌ ರಾಕ್ ಗಾರ್ಡನ್ ನಲ್ಲಿ‌ ಬಹುತೇಕ‌‌ ಕಾಮಗಾರಿಗಳು ಪೂರ್ಣಗೊಂಡಿದ್ದು, ಶೀಘ್ರವೇ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು ರಾಕ್ ಗಾರ್ಡನ್ ಉದ್ಘಾಟಿಸಲಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.‌ ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಲ್ಲೇಶಪ್ಪ ಹೊರಪೇಟೆ, ಸೈನಿಕ ಶಾಲೆ ಪ್ರಾಂಶುಪಾಲ ಕೆ.ಟಿ.ಕರಮಚಂದನ್ ಹಾಗೂ ಇನ್ನಿತರ‌ ಅಧಿಕಾರಗಳು ಹಾಜರಿದ್ದರು.

    ವರದಿ:- ಬಾಳು ತೇರದಾಳ ಬೆಳಗಾವಿ

    Demo
    Share. Facebook Twitter LinkedIn Email WhatsApp

    Related Posts

    ಮಹಿಳಾ ಅಧಿಕಾರಿಗೆ ರವಿಕುಮಾರ್ ಆ ರೀತಿ ಮಾತಾಡಿದ್ದು ತಪ್ಪು: ಸಂತೋಷ್ ಲಾಡ್!

    July 4, 2025

    ಹುಬ್ಬಳ್ಳಿಯಲ್ಲಿ ಹೈಟೆಕ್ ವೆಶ್ಯಾವಾಟಿಕೆ: ಐವರು ವಿದೇಶಿ ಮಹಿಳೆಯರ ರಕ್ಷಣೆ!

    July 4, 2025

    ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಇದು ನೀಚ ಕೆಲಸ ಎಂದ HK ಪಾಟೀಲ್

    July 4, 2025

    ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ: ಚಾಲಕ ಗಂಭೀರ, ಓರ್ವ ಸಾವು!

    July 4, 2025

    ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಆರೋಪಿ ಬಂಧಿಸಿದ NIA

    July 4, 2025

    ಗದಗ| ಲಾರಿ, ಬಸ್ ಹಾಗೂ ಕಾರು ನಡುವೆ ಸರಣಿ ಅಪಘಾತ!

    July 4, 2025

    ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್​ ಶವ ಪತ್ತೆ: ಸಾವಿನ ಸುತ್ತ ಅನುಮಾನಗಳ ಹುತ್ತ!

    July 4, 2025

    ಅವಹೇಳನಕಾರಿ ಹೇಳಿಕೆ ಆರೋಪ: ಪೋಕ್ಸೋ ಅತ್ಯಾಚಾರಿಗಳು ಬಿಜೆಪಿಯಲ್ಲೇ ಇದ್ದಾರೆ – ಪ್ರಿಯಾಂಕ್ ಖರ್ಗೆ

    July 4, 2025

    ಸಣ್ಣಪುಟ್ಟ ಹೇಳಿಕೆಯಿಂದ ಸಿಎಂ ಬದಲಾವಣೆ ಚರ್ಚೆಯಾಗಲ್ಲ: ಶಿವರಾಜ್ ತಂಗಡಗಿ

    July 4, 2025

    ಬೀದರ್: ಅದ್ಧೂರಿಯಾಗಿ ನಡೆದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ

    July 4, 2025

    ಹೃದಯ ಜೋಪಾನ ; ಮಿಮ್ಸ್ ನಲ್ಲಿ ಹೃದಯ ವೈದ್ಯರೇ ಇಲ್ಲ

    July 4, 2025

    ಕಾರು ಹರಿದು ಮೂರು ವರ್ಷದ ಬಾಲಕಿ ಮೃತ್ಯು

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.