Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    DK Sivakumar: ಬಿಜೆಪಿಗೆ ರಾಜಕೀಯ ಮುಖ್ಯವೇ ಹೊರತು ಜನರ ಸಮಸ್ಯೆ, ರಾಜ್ಯದ ಅಭಿವೃದ್ಧಿಯಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

    By AIN AuthorDecember 15, 2023
    Share
    Facebook Twitter LinkedIn Pinterest Email
    Demo

    ಬೆಳಗಾವಿ, ಡಿ. 15: “ಬಿಜೆಪಿ ನಾಯಕರಿಗೆ ರಾಜಕಾರಣ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಾಗಲಿ, ಜನರ ಸಮಸ್ಯೆಯಾಗಲಿ ಅಲ್ಲ. ಅವರಿಗೆ ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡೋಕಾಗುತ್ತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಸುವರ್ಣಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಉತ್ತರಿಸಿದರು.

    “ಬಿಜೆಪಿ ಹಾಗೂ ಜನತಾದಳದವರಿಗೆ ಜನರ ಸಮಸ್ಯೆ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಮುಖ್ಯ. ಆದರೆ ಬಿಜೆಪಿಯವರಿಗೆ ಈ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲದಿದ್ದರೆ ನಾವೇನು ಮಾಡಲು ಸಾಧ್ಯ? ಬಿಜೆಪಿಗೆ ಕೇವಲ ರಾಜಕಾರಣ ಬೇಕು. ಅವರು ರಾಜಕಾರಣ ಮಾಡಿಕೊಂಡಿರಲಿ, ನಾವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ” ಎಂದರು.

    ಭೋಜನಕೂಟದಲ್ಲಿ ಅನ್ಯ ಪಕ್ಷಗಳ ಶಾಸಕರ ಭಾಗಿ ವಿಚಾರವಾಗಿ ಕೇಳಿದಾಗ, “ಮದುವೆ, ಶುಭ ಸಮಾರಂಭ, ಭೋಜನ ಕೂಟದಲ್ಲಿ ನಾಯಕರು ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಸೇರುತ್ತಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿಯವರು ನನ್ನ ಜೊತೆ ಮಾತನಾಡುವುದು, ನಮ್ಮ ಪಕ್ಷದ ನಾಯಕರು ಅವರ ಜೊತೆ ಮಾತನಾಡುವುದು ಸಹಜವಾದುದ್ದು. ರಾಜಕೀಯವಾಗಿ ಏನೇ ಭಿನ್ನಾಭಿಪ್ರಾಯವಿದ್ದರೂ ಮನುಷ್ಯರ ನಡುವಣ ಬಾಂಧವ್ಯ ಮುಖ್ಯವಾದುದು. ಸದನದ ಕಲಾಪ ಸಮಯದಲ್ಲೂ ಕೆಲವು ವಿಚಾರಗಳ ಚರ್ಚೆಗೆ ಸಭೆ ಕರೆದಾಗ ವಿರೋಧ ಪಕ್ಷಗಳ ನಾಯಕರನ್ನೂ ಆಹ್ವಾನಿಸುತ್ತೇವೆ.

    ರಾಜಕೀಯ ಮಾಡಲು ಬಯಸುವವರು ಸಭೆಗೆ ಬರುವುದಿಲ್ಲ. ನಾವು ಸಹಜವಾಗಿ ಭೋಜನ ಕೂಟಕ್ಕೆ ಎಲ್ಲಾ ಶಾಸಕರನ್ನು ಆಹ್ವಾನಿಸುತ್ತೇವೆ. ಕೆಲವರು ಬರುತ್ತಾರೆ, ಕೆಲವರು ನಿರಾಕರಿಸುತ್ತಾರೆ. ನಮಗೆ ಆತ್ಮೀಯರಾಗಿರುವವರನ್ನು ನಾವು ಕರೆಯುತ್ತೇವೆ. ಅದರಲ್ಲಿ ತಪ್ಪೇನಿದೆ” ಎಂದರು. ಶಾಸಕ ಪ್ರಸಾದ್ ಅಬ್ಬಯ್ಯ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಬಗ್ಗೆ ಪ್ರಸ್ತಾಪ ಮಾಡಿದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ಪ್ರತಿಕ್ರಿಯಿಸಲು ನಿರಾಕರಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಮಹಿಳಾ ಅಧಿಕಾರಿಗೆ ರವಿಕುಮಾರ್ ಆ ರೀತಿ ಮಾತಾಡಿದ್ದು ತಪ್ಪು: ಸಂತೋಷ್ ಲಾಡ್!

    July 4, 2025

    ಹುಬ್ಬಳ್ಳಿಯಲ್ಲಿ ಹೈಟೆಕ್ ವೆಶ್ಯಾವಾಟಿಕೆ: ಐವರು ವಿದೇಶಿ ಮಹಿಳೆಯರ ರಕ್ಷಣೆ!

    July 4, 2025

    ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಇದು ನೀಚ ಕೆಲಸ ಎಂದ HK ಪಾಟೀಲ್

    July 4, 2025

    ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ: ಚಾಲಕ ಗಂಭೀರ, ಓರ್ವ ಸಾವು!

    July 4, 2025

    ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಆರೋಪಿ ಬಂಧಿಸಿದ NIA

    July 4, 2025

    ಗದಗ| ಲಾರಿ, ಬಸ್ ಹಾಗೂ ಕಾರು ನಡುವೆ ಸರಣಿ ಅಪಘಾತ!

    July 4, 2025

    ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್​ ಶವ ಪತ್ತೆ: ಸಾವಿನ ಸುತ್ತ ಅನುಮಾನಗಳ ಹುತ್ತ!

    July 4, 2025

    ಅವಹೇಳನಕಾರಿ ಹೇಳಿಕೆ ಆರೋಪ: ಪೋಕ್ಸೋ ಅತ್ಯಾಚಾರಿಗಳು ಬಿಜೆಪಿಯಲ್ಲೇ ಇದ್ದಾರೆ – ಪ್ರಿಯಾಂಕ್ ಖರ್ಗೆ

    July 4, 2025

    ಸಣ್ಣಪುಟ್ಟ ಹೇಳಿಕೆಯಿಂದ ಸಿಎಂ ಬದಲಾವಣೆ ಚರ್ಚೆಯಾಗಲ್ಲ: ಶಿವರಾಜ್ ತಂಗಡಗಿ

    July 4, 2025

    ಬೀದರ್: ಅದ್ಧೂರಿಯಾಗಿ ನಡೆದ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ

    July 4, 2025

    ಹೃದಯ ಜೋಪಾನ ; ಮಿಮ್ಸ್ ನಲ್ಲಿ ಹೃದಯ ವೈದ್ಯರೇ ಇಲ್ಲ

    July 4, 2025

    ಕಾರು ಹರಿದು ಮೂರು ವರ್ಷದ ಬಾಲಕಿ ಮೃತ್ಯು

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.