Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರೈತರೇ ಗಮನಿಸಿ:  ಸೆಪ್ಟೆಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ: ಸಚಿವ ಕೃಷ್ಣ ಬೈರೇಗೌಡ

    By AIN AuthorAugust 13, 2024
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಸೆಪ್ಟೆಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ (Podi Campaign) ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ (Krishna Byregowda) ಹೇಳಿದ್ದಾರೆ.

    ವಿಕಾಸಸೌಧದದಲ್ಲಿ (Vidhana Soudha) ಬೆಂಗಳೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ವೇಳೆ, ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ. ಸಾಗುವಳಿ ಮಾಡುವ ರೈತರಿಗೆ ಮಂಜೂರು ಮಾಡಿರುವ ಲಕ್ಷಾಂತರ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ಪೋಡಿ ದುರಸ್ತಿಯಾಗಿಲ್ಲ. ಈ ಹಿಂದಿನ ಸರ್ಕಾರದ ಅವಧಿಯಲ್ಲೂ ಹತ್ತಾರು ಚರ್ಚೆ, ನಾನಾ ಪ್ರಯತ್ನಗಳಾಗಿದ್ದರೂ ಈ ವಿಚಾರದಲ್ಲಿ ಸರಿಯಾದ ಪರಿಹಾರ ನೀಡಲು ಸಾಧ್ಯವಾಗಿಲ್ಲ. ರೈತರಿಗೆ ಅವರ ಜಮೀನಿನ ಹಕ್ಕನ್ನು ಸಂಪೂರ್ಣವಾಗಿ ಅವರಿಗೇ ನೀಡಲು, ಈ ವಿಚಾರದಲ್ಲಿ ಶಾಶ್ವತ ಪರಿಹಾರ ನೀಡಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಭರವಸೆ ನೀಡಿದ್ದಾರೆ.

    Mysuru Dasara: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಾಂಕ ನಿಗದಿ: ಅ.3 ರಿಂದ ಅ.12 ರ ವರೆಗೆ ಮಹೋತ್ಸವ

    ರೈತರಿಗೆ ಜಮೀನು ಮಂಜೂರಾಗಿದ್ದರೂ ಪೋಡಿ ದುರಸ್ಥಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ. ದಶಕಗಳ ಹಿಂದಿನಿಂದಲೂ ನಮ್ಮ ಅಧಿಕಾರಿಗಳು 100 ಎಕರೆ ಜಮೀನಿದ್ದರೆ ಅದಕ್ಕಿಂತ ಹೆಚ್ಚು ವಿಸ್ತೀಣ ಮಂಜೂರು ಮಾಡಿದ್ದಾರೆ. ಇದೊಂದು ಕಾರಣವಾದರೆ, ಕೆಲವು ಸಂದರ್ಭದಲ್ಲಿ ಸಾಗುವಳಿ ಮಾಡದಂತವರಿಗೂ ಮಂಜೂರು ಮಾಡಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಆರ್‌ಟಿಸಿಯಲ್ಲಿ ಮಂಜೂರುದಾರರ ಹೆಸರಿದೆ. ಆದರೆ, ಅವರಿಗೆ ಮಂಜೂರು ಆಗಿರುವ ಬಗ್ಗೆ ಯಾವುದೇ ನಿಖರ ದಾಖಲೆಗಳಿಲ್ಲ. ಮತ್ತಷ್ಟು ಪ್ರಕರಣಗಳಲ್ಲಿ ಮಂಜೂರಿಗೆ ಅರ್ಜಿ ಕೊಟ್ಟಿರುವ ದಾಖಲೆ ಇದೆ. ಆದರೆ, ಮಂಜೂರು ಆಗಿರುವ ದಾಖಲೆ ಇಲ್ಲ. ಈ ಎರಡು ಪ್ರಮುಖ ಕಾರಣಗಳಿಂದ ಜಮೀನು ಮಂಜೂರಾಗಿದ್ರೂ ದುರಸ್ತಿಯಾಗಿಲ್ಲ. ಹೀಗಾಗಿ ರೈತರು ಅಂತಹ ಜಮೀನಿನಲ್ಲಿ ಕೃಷಿ ಮಾಡಬಹುದೇ ವಿನಃ ಅವರಿಗೆ ಆ ಭೂಮಿಯಿಂದ ಬೇರೆ ಯಾವುದೇ ಪ್ರಯೋಜನ ಇಲ್ಲ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರೂ ಸೇರಿದಂತೆ ಎಲ್ಲಾ ಸಚಿವರ ಒತ್ತಡ ಇದೆ. ರೈತರಿಂದಲೂ ಸಾಕಷ್ಟು ಒತ್ತಡವಿದೆ. ಹೀಗಾಗಿ ಕಳೆದ ಆರೆಂಟು ತಿಂಗಳಿನಿಂದ ಅಧಿಕಾರಿಗಳ ಜೊತೆ ನಿರಂತರ ಚರ್ಚೆ ನಡೆಸಿ ಇದೀಗ ಈ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದ್ದೇವೆ. ಯಾರಿಗೆ ಪೋಡಿ ಮಾಡಿಕೊಡಲು ಸಾಧ್ಯವೋ ಅವರಿಗೆಲ್ಲಾ ಪೋಡಿ ಮಾಡಿಕೊಡಲೇಬೇಕು ಎಂದು ನಮ್ಮ ಸರ್ಕಾರದ ಸಂಕಲ್ಪ ಮಾಡಿದೆ. ಇದಕ್ಕೆಂದು ಪ್ರಾಯೋಗಿಕ ಆಪ್ ಸಿದ್ಧಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ

    Demo
    Share. Facebook Twitter LinkedIn Email WhatsApp

    Related Posts

    ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

    June 8, 2025

    ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಹೆಚ್ಚಿಸಿದ ರಾಜ್ಯ ಸರ್ಕಾರ!

    June 7, 2025

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.11ರ ಬಳಿಕ ಜೋರು ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

    June 7, 2025

    ಚಿನ್ನಸ್ವಾಮಿ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ: ಗೋವಿಂದ ಕಾರಜೋಳ!

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಇದೊಂದು ಲಜ್ಜೆಗೇಡಿ ಸರ್ಕಾರ – ಸಚಿವ ಸೋಮಣ್ಣ ಆಕ್ರೋಶ

    June 7, 2025

    ಮಳೆ ಹಾನಿ ಪ್ರದೇಶಗಳಿಗೆ ಶಾಸಕಿ ಮಂಜುಳಾ ಲಿಂಬಾವಳಿ ಭೇಟಿ, ಪರಿಶೀಲನೆ

    June 7, 2025

    RCB ವಿಜಯೋತ್ಸವದಲ್ಲಿ ಕಾಲ್ತುಳಿತ ಕೇಸ್: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು!

    June 7, 2025

    ಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು: ನಟ ಮಡೆನೂರು ಮನು

    June 7, 2025

    ಆಫೀಸ್’ನಲ್ಲಿ ನಿಮ್ಮ ಬಾಸ್’ನನ್ನು ಇಂಪ್ರೆಸ್ ಮಾಡಬೇಕೆಂದರೆ ಹೀಗೆ ಮಾಡಿ..! ರಿಸಲ್ಟ್ ಗ್ಯಾರಂಟಿ

    June 7, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ಅಧಿಕಾರಿಗಳ ತಲೆದಂಡ ಕುರಿತು ನಟಿ ರಮ್ಯಾ ಹೇಳಿದ್ದೇನು..?

    June 7, 2025

    ಸೂಟ್ ಕೇಸ್’ನಲ್ಲಿ ಬಾಲಕಿಯ ಶವ ಪತ್ತೆ ಕೇಸ್: ಬಿಹಾರದಲ್ಲಿ 7 ಜನರ ಬಂಧನ!

    June 7, 2025

    ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB: ಹೆಚ್.ಡಿ. ಕುಮಾರಸ್ವಾಮಿ

    June 7, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.