Close Menu
Ain Live News
    Facebook X (Twitter) Instagram YouTube
    Tuesday, June 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಚುನಾವಣೆಯಲ್ಲಿ ಎಎಪಿ ಗೆದ್ದರೆ “ಡಾ.ಅಂಬೇಡ್ಕರ್ ಸಮ್ಮಾನ್” ವಿದ್ಯಾರ್ಥಿ ವೇತನ: ಕೇಜ್ರಿವಾಲ್ ಘೋಷಣೆ

    By Author AINDecember 21, 2024
    Share
    Facebook Twitter LinkedIn Pinterest Email
    Demo

    ನವದೆಹಲಿ: ರಾಜ್ಯಸಭೆಯಲ್ಲಿ ಡಾ. ಬಿ.ಆರ್​. ಅಂಬೇಡ್ಕರ್ ಬಗ್ಗೆ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಂಬೇಡ್ಕರ್ ಜಪ ಪಠಿಸುವುದು ಫ್ಯಾಶನ್ ಆಗಿಬಿಟ್ಟಿದೆ. ಈ ರೀತಿ 100 ಬಾರಿ ಅಂಬೇಡ್ಕರ್ ಹೆಸರು ಹೇಳುವ ಬದಲು ದೇವರ ನಾಮವನ್ನಾದರೂ ಪಠಿಸಿದ್ದರೆ ಏಳೇಳು ಜನ್ಮದಲ್ಲೂ ಸ್ವರ್ಗಕ್ಕೆ ಹೋಗುತ್ತಿದ್ದಿರಿ ಎಂದು ವ್ಯಂಗ್ಯವಾಡಿದ್ದರು. ಇದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿ, ಅಂಬೇಡ್ಕರ್ ಕುರಿತು ಅವಮಾನಕಾರಿಯಾಗಿ ಮಾತನಾಡಿದ ಅಮಿತ್ ಶಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.

    ಇದರ ಬೆನ್ನಲ್ಲೇ “ಡಾ.ಅಂಬೇಡ್ಕರ್ ಸಮ್ಮಾನ್” ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಲಾಗುತ್ತಿದೆ ಎಂದು  ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಗೆದ್ದರೆ ವಿದೇಶಿ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆದ ದಲಿತ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರ ಧನಸಹಾಯ ನೀಡಲಿದೆ. ದೆಹಲಿಯ ಯಾವುದೇ ದಲಿತ ವಿದ್ಯಾರ್ಥಿಯು ಹಣದ ಕೊರತೆಯಿಂದಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ತಮ್ಮ ಅಧ್ಯಯನವನ್ನು ತ್ಯಜಿಸಬಾರದು ಎಂದು ಕೇಜ್ರಿವಾಲ್ ತಮ್ಮ ಪ್ರಚಾರದಲ್ಲಿ ತಿಳಿಸಿದರು.

    PM Kisan: ಪಿಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ ಬರೋದು ಯಾವಾಗ ಗೊತ್ತಾ..? ಇಲ್ಲಿದೆ ಉತ್ತರ

    ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅ್ಯಂಡ್ ಪೊಲಿಟಿಕಲ್ ಸೈನ್ಸ್‌ನಲ್ಲಿ ಓದುವಾಗ ಹಣದ ಕೊರತೆಯಿಂದ ತಮ್ಮ ಶಿಕ್ಷಣವನ್ನು ಮಧ್ಯದಲ್ಲಿ ನಿಲ್ಲಿಸಬೇಕಾಯಿತು. ಅವರು ಮನೆಗೆ ಹಿಂದಿರುಗಿ ಹಣದ ವ್ಯವಸ್ಥೆ ಮಾಡಿಕೊಂಡು ಹಿಂತಿರುಗಿ ಅವರ ಶಿಕ್ಷಣವನ್ನು ಪೂರ್ಣಗೊಳಿಸಿದರು ಎಂದರು.

    ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನು ಅಪಹಾಸ್ಯ ಮಾಡುತ್ತಿದ್ದಾರೆ. ಅವರ ಹೇಳಿಕೆಯಿಂದ ನನಗೂ ಸೇರಿ ಕೋಟ್ಯಂತರ ಅನುಯಾಯಿಗಳಿಗೆ ನೋವಾಗಿದೆ. ಸ್ವತಂತ್ರ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಯಾರಾದರೂ ಸಂಸತ್ತಿನಲ್ಲಿ ಅಪಹಾಸ್ಯ ಮಾಡುತ್ತಾರೆಂದು ಯಾರೂ ಊಹಿಸಿರಲಿಲ್ಲ. ಅಮಿತ್ ಶಾ ಅವರ ಅಗೌರವದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ನಾನು ಈ ಘೋಷಣೆ ಮಾಡುತ್ತಿದ್ದೇನೆ. ಯೋಜನೆಯಲ್ಲಿ ಸರ್ಕಾರಿ ನೌಕರರ ಮಕ್ಕಳನ್ನೂ ಸೇರಿಸಲಾಗುವುದು ಎಂದು ತಿಳಿಸಿದರು.

     

    Demo
    Share. Facebook Twitter LinkedIn Email WhatsApp

    Related Posts

    ಹಿಂದಿಯ ಖ್ಯಾತ ಸೀರಿಯಲ್ ಶೂಟಿಂಗ್ ಸೆಟ್ ನಲ್ಲಿ ಭೀಕರ ಬೆಂಕಿ ಅವಘಡ: ಅರ್ಧಕ್ಕೆ ನಿಲ್ಲುತ್ತಾ ಧಾರವಾಹಿ?

    June 23, 2025

    ಜಮ್ಮುವಿನಲ್ಲಿ ಲ್ಯಾಂಡ್ ಆಗದೆ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್..! ಯಾಕೆ ಗೊತ್ತಾ..?

    June 23, 2025

    IndiGo Pilot: ಪೈಲಟ್ ಆಗಲು ನೀನು ಯೋಗ್ಯನಲ್ಲ, ಹೋಗಿ ಸ್ಯಾಂಡಲ್ ಹೊಲಿಯಿರಿ: ಹಿರಿಯ ಅಧಿಕಾರಿಗಳಿಂದ ಕಿರುಕುಳ!

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಸಾರ್ವಜನಿಕರೇ ಗಮನಿಸಿ.. ಹೊಸ ರೀತಿಯ ವಂಚನೆ: ಕೆಲವೇ ಸೆಕೆಂಡುಗಳಲ್ಲಿ 45 ಲಕ್ಷ ರೂ. ಮಾಯ!

    June 23, 2025

    ಗೋಲ್ಡ್ ಬೆಲೆಯಲ್ಲಿ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

    June 23, 2025

    ಕಾರಿನಡಿ ಸಿಲುಕಿ ವೃದ್ಧ ಸಾವು: ಆಂಧ್ರ ಮಾಜಿ ಸಿಎಂ ಜಗನ್ ರ‍್ಯಾಲಿ ವೇಳೆ ದುರಂತ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ಪಹಲ್ಗಾಮ್‌ ದಾಳಿ ಕೇಸ್: ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.