Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Republic Day: ಜನವರಿ 26ರಂದೇ ಗಣರಾಜ್ಯೋತ್ಸವ ಏಕೆ!? ಇದರ ಮಹತ್ವ ನೀವು ತಿಳಿದಿದ್ದೀರಾ!?

    By AIN AuthorJanuary 26, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು/ನವದೆಹಲಿ:- ಜ.26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮ, ದೇಶಭಕ್ತಿಗಳಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ ಆಚರಿಸುತ್ತೇವೆ.

    ಚಾಮರಾಜನಗರದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ

    ಆ.15 ಬ್ರಿಟಿಷರಿಂದ ತಾತ್ವಿಕವಾಗಿ ಸ್ವಾತಂತ್ರ್ಯ ಪಡೆದುಕೊಂಡ ದಿನವಾದರೆ, ಜ.26 1950 ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಿದ ದಿನ. ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನ. ಈ ಕಾರಣಕ್ಕಾಗಿ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಅತ್ಯಂತ ಮಹತ್ವ ದಿನ. ಭಾರತ ತನ್ನದೇ ಆದ ಸಂವಿಧಾನವನ್ನು ಜಾರಿಗೆ ತರುತ್ತಿದ್ದಂತೆಯೇ ಪ್ರಜಾಪ್ರಭುತ್ವ ಗಣರಾಜ್ಯವಾಗಿ ಬದಲಾಯಿತು. ಸರಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಜ.26 ರಂದೇ ಏಕೆ ಆಚರಣೆ ಮಾಡಲಾಗುತ್ತದೆ ಎಂಬುದಕ್ಕೆ ಇಲ್ಲಿದೆ ಮಾಹಿತಿ.

    ಹೌದು, ಭಾರತವು 76ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮದಲ್ಲಿದ್ದು, ಈಗಾಗಲೇ ಈ ದಿನದ ಆಚರಣೆ ಎಲ್ಲೆಲ್ಲೂ ನಡೆಯುತ್ತಿದೆ. ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಅತ್ಯಂತ ಮಹತ್ವ ದಿನವಾಗಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಆಗಸ್ಟ್ 15 ಬ್ರಿಟಿಷರಿಂದ ತಾತ್ವಿಕವಾಗಿ ಸ್ವಾತಂತ್ರ್ಯ ಪಡೆದುಕೊಂಡ ದಿನವಾದರೆ, 1950 ಜನವರಿ 26 ರಂದು ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಲಾಗಿದ್ದು, ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವವು ಅಸ್ಥಿತ್ವಕ್ಕೆ ಬಂದ ದಿನವಾಗಿದೆ. ಹೀಗಾಗಿ ಈ ದಿನವು ಸ್ವಾತಂತ್ರ್ಯ ದಿನದಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.

    1950ರ ಜನವರಿ 26ರಂದು ಸಂವಿಧಾನವನ್ನು ಅಂಗೀಕರಿಸುವ ಮೂಲಕ ಗಣರಾಜ್ಯ ಎಂದು ಘೋಷಿಸಲ್ಪಟ್ಟ ದಿನವಾಗಿದೆ. ದೇಶದ ಮೊದಲ ಸಂವಿಧಾನ ಸಭೆ 1946ರ ಡಿಸೆಂಬರ್‌ 9ರಂದು ತನ್ನ ಮೊದಲ ಅಧಿವೇಶನ ನಡೆಸಿತ್ತು. ಕೊನೆಯ ಅಧಿವೇಶನ 1949ರ ನವೆಂಬರ್‌ 26ರಂದು ನಡೆದಿತ್ತು. ಡಾ.ಬಿ.ಆರ್.‌ ಅಂಬೇಡ್ಕರ್‌ ನೇತೃತ್ವದ ಸಂವಿಧಾನ ರಚನಾ ಸಮಿತಿ ರಚಿಸಿದ ಸಂವಿಧಾನವನ್ನು ಒಂದು ವರ್ಷದ ಬಳಿಕ ಅಂಗೀಕರಿಸಲಾಯಿತು. ಹೀಗಾಗಿ 26 ಜನವರಿ 1950 ರಂದು ಸಂವಿಧಾನ ಜಾರಿಗೆ ಬಂದಿತು. ಅಂದಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್​​ ಭಾರತದ ಬಾವುಟವನ್ನು ಹಾರಿಸಿ ಸಂವಿಧಾನ ಜಾರಿಗೆ ಬಂದ ದಿನವನ್ನು ಘೋಷಿಸಿದ್ದರು. ಅಂದಿನಿಂದ ಪ್ರತಿ ವರ್ಷ ಜನವರಿ 26 ಗಣರಾಜ್ಯೋತ್ಸವ ದಿನವನ್ನು ಹಬ್ಬದಂತೆ ದೇಶದಾದಂತ್ಯ ಆಚರಿಸಲಾಗುತ್ತಿದೆ.

    ಪ್ರತಿ ವರ್ಷ ಭಾರತ ಸರ್ಕಾರವು ಗಣರಾಜ್ಯೋತ್ಸವವನ್ನು ಒಂದು ನಿರ್ದಿಷ್ಟ ಥೀಮ್ ನಲ್ಲಿ ಆಚರಿಸಲಾಗುತ್ತದೆ. ಈ ವರ್ಷ ‘ಸುವರ್ಣ ಭಾರತ: ಪರಂಪರೆ ಮತ್ತು ಪ್ರಗತಿ‘ ಎಂಬ ಥೀಮ್ ನಲ್ಲಿ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಇದು ರಾಷ್ಟ್ರದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಅದರ ಬೆಳವಣಿಗೆ ಹಾಗೂ ಅಭಿವೃದ್ಧಿಯನ್ನು ಎತ್ತಿ ತೋರಿಸುತ್ತದೆ.

    ರಾಜಪ್ರಭುತ್ವವು ಅಂತ್ಯವಾಗಿ ಭಾರತದಲ್ಲಿ ಸಂವಿಧಾನವನ್ನು ಸ್ಥಾಪಿಸಿದ ದಿನವಾಗಿದ್ದು ಈ ದಿನದ ಆಚರಣೆಯೂ ಮಹತ್ವದ್ದಾಗಿದೆ. ಹೀಗಾಗಿ ಭಾರತವು ಪ್ರತಿ ವರ್ಷವು ಗಣರಾಜ್ಯೋತ್ಸವ ದಿನಕ್ಕೆ ವಿದೇಶದಿಂದ ಗಣ್ಯ ವ್ಯಕ್ತಿಗಳನ್ನು ಅತಿಥಿಗಳನ್ನಾಗಿ ಆಹ್ವಾನಿಸುತ್ತದೆ. ಗಣರಾಜ್ಯೋತ್ಸವದಂದು ನವದೆಹಲಿಯ ಇಂಡಿಯಾ ಗೇಟ್‌ನಲ್ಲಿ ಭಾರತದ ರಾಷ್ಟ್ರಪತಿಗಳಿಂದ ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತದೆ. ನವದೆಹಲಿಯಲ್ಲಿ ರಾಜ್‌ಪಥ್‌ ನಡೆಯುತ್ತದೆ. ಭಾರತದ ರಾಷ್ಟ್ರೀಯ ಸೇನೆಯನ್ನು ಒಳಗೊಂಡ ಪರೇಡ್, ರಾಜ್ಯಗಳ ಸಾಂಸ್ಕೃತಿಕ ಮೆರಗನ್ನು ಸಾರುವ ಸ್ತಬ್ಧ ಚಿತ್ರಗಳ ಆಕರ್ಷಣೆಯ ಕೇಂದ್ರ ಬಿಂದುವಾಗಿರುತ್ತದೆ. ಈ ವಿಶೇಷ ದಿನದಂದು ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಹುತಾತ್ಮರಿಗೆ ಗೌರವ ಸಲ್ಲಿಸಲಾಗುತ್ತದೆ.

    Demo
    Share. Facebook Twitter LinkedIn Email WhatsApp

    Related Posts

    ಸಂಜು ವೆಡ್ಸ್ ಗೀತಾ 2’ ತಂಡದ ಆರೋಪಕ್ಕೆ ರಚಿತಾ ತಿರುಗೇಟು: ವಿಡಿಯೋ ಮೂಲಕ ಡಿಂಪಲ್ ಕ್ವೀನ್ ಕೊಟ್ಟ ಕ್ಲಾರಿಟಿ ಇಲ್ಲಿದೆ!

    June 20, 2025

    ಇಂಗ್ಲಿಷ್ ನಾಚಿಕೆಗೇಡಿನ ಭಾಷೆಯಲ್ಲ, ಅದು ಸಬಲೀಕರಣಗೊಳಿಸುವ ಭಾಷೆ: ರಾಹುಲ್ ಗಾಂಧಿ

    June 20, 2025

    Air India: ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಪುಣೆ-ದೆಹಲಿ ಪ್ರಯಾಣ ರದ್ದು

    June 20, 2025

    ಬಡವರು ಹಣ ಕೊಟ್ಟು ಮನೆ ತೆಗೆದುಕೊಳ್ಳುವ ದುಸ್ಥಿತಿ ನಿರ್ಮಾಣ ಆಗಿದೆ: ಬಿ.ಎಸ್. ಯಡಿಯೂರಪ್ಪ

    June 20, 2025

    ಬೆಂಗಳೂರಿನಲ್ಲಿ ಘೋರ ದುರಂತ: ಹೈಟೆನ್ಷನ್ ವೈರ್ ಸ್ಪರ್ಶಿಸಿ 10 ವರ್ಷದ ಬಾಲಕ ಸಾವು..!

    June 20, 2025

    BR ಪಾಟೀಲ್ ಆಡಿಯೋ ವೈರಲ್ ವಿಚಾರ: ಸಿಎಂ ಸಿದ್ದರಾಮಯ್ಯ ಬಣ್ಣ ಬಯಲು – ಪರಿಷತ್ ಶಾಸಕ ಟಿ.ಎ.ಶರವಣ ಆಕ್ರೋಶ

    June 20, 2025

    ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಕಿಡಿ

    June 20, 2025

    ಕೃಷಿಯಿಂದ ಹೆಚ್ಚು ಉದ್ಯೋಗ ಸೃಷ್ಟಿ- ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿಎಂ ಸಿದ್ದರಾಮಯ್ಯ

    June 20, 2025

    ರಾಷ್ಟ್ರಪತಿ ದ್ರೌಪದಿ ಮುರ್ಮು ಹುಟ್ಟುಹಬ್ಬ: ಶುಭಾಶಯ ಕೋರಿದ ಪರಿಷತ್ ಶಾಸಕ ಟಿ ಎ ಶರವಣ

    June 20, 2025

    ಕಿಚ್ಚ ಸುದೀಪ್‌ ಹೆಸರಲ್ಲಿ ಪಂಗನಾಮ..ಯುವನಟನಿಗೆ ನಂದಕಿಶೋರ್‌ ದೋಖಾ…?

    June 20, 2025

    ಛತ್ತೀಸ್’ಗಢದಲ್ಲಿ ಎನ್ಕೌಂಟರ್: ಇಬ್ಬರು ಮಾವೋವಾದಿಗಳ ಹತ್ಯೆ

    June 20, 2025

    ಮದುವೆಯಾಗದೆ 100 ಮಕ್ಕಳ ತಂದೆಯಾದ ಟೆಲಿಗ್ರಾಂ CEO.! ಕರುಳ ಕುಡಿಗಳಿಗೆ 20 ಬಿಲಿಯನ್ ಡಾಲರ್ ದೇಣಿಗೆ

    June 20, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.