ಟಾಟಾ ಕ್ಯಾಪಿಟಲ್ ಲಿಮಿಟೆಡ್ ಕಂಪನಿಯು ಭಾರತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನೀಡಲಾಗುವ ‘ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್ಶಿಪ್ ಪ್ರೋಗ್ರಾಮ್’ ಅನ್ನು ಜಾರಿ ಮಾಡಿದೆ. ಆರ್ಥಿಕವಾಗಿ ಹಿಂದುಳಿದ ಬಡತನ ರೇಖೆಯಲ್ಲಿರುವ ವರ್ಗಗಳ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನ ನೀಡಲಿದ್ದು,
ಆಸಕ್ತರು ಅರ್ಹತೆ, ಸೌಲಭ್ಯ, ಪ್ರಮುಖ ದಿನಾಂಕ, ಅರ್ಜಿ ವಿಧಾನ ಕುರಿತು ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ. ಈ ಸ್ಕಾಲರ್ಶಿಪ್ ಅನ್ನು ಟಾಟಾ ಕ್ಯಾಪಿಟಲ್ ಲಿಮಿಟೆಡ್ ಕಾರ್ಪೋರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ (ಸಿಎಸ್ಆರ್) ಉಪಕ್ರಮವಾಗಿ ನೀಡುತ್ತಿದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಹ 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಪದವಿ ಡಿಪ್ಲೋಮಾ ಪಾಲಿಟೆಕ್ನಿಕ್ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳು 10,000 ದಿಂದ 12 ಸಾವಿರದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುತ್ತಾರೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹಿಂದಿನ ತರಗತಿಯಲ್ಲಿ ವಿದ್ಯಾರ್ಥಿಯು ಕನಿಷ್ಠ 60% ಅಂಕಗಳನ್ನು ಗಳಿಸಿ ಪಾಸ್ ಆಗಿರಬೇಕು.
- ವಿದ್ಯಾರ್ಥಿಯ ವರ್ಷದ ಕುಟುಂಬದ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು
- ಭಾರತದ ಕಾಯಂ ನಿವಾಸಿಯಾಗಿರುವಂತಹ ವಿದ್ಯಾರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
- ಈ ವಿದ್ಯಾರ್ಥಿ ವೇತನಕ್ಕೆ ಭಾರತದ ಮಾನ್ಯತೆ ಪಡೆದಿರುವಂತಹ ಯಾವುದೇ ಶಿಕ್ಷಣ ಸಂಸ್ಥೆಯಿಂದ 12 ಅಥವಾ 11ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಆಗಿರಬೇಕು.
ಬೇಕಾಗುವ ದಾಖಲೆಗಳು:
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಕಾಲೇಜಿನ ಗುರುತಿನ ಚೀಟಿ
- ಆದಾಯ ಪ್ರಮಾಣ ಪತ್ರ
- ಶುಲ್ಕ ತುಂಬಿದ ರಶೀದಿ
- ಹಿಂದಿನ ವರ್ಷದ ಅಂಕಪಟ್ಟಿ
- ಇನ್ನಿತರ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ಈ ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-2-2025 ಆಗಿರುತ್ತದೆ.