ಬೆಂಗಳೂರು:- ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬಿಗ್ ಶಾಕ್ ಕೊಟ್ಟಿದೆ. ಬಿಬಿಎಂಪಿಯ ಎಲ್ಲಾ 8 ವಲಯಗಳಲ್ಲಿ 608 ಆಸ್ತಿಗಳಿಂದ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದವರ ಆಸ್ತಿಗಳ ಮಾರಾಟಕ್ಕೆ ಪಾಲಿಕೆ ಮುಂದಾಗಿದೆ. ಆಸ್ತಿ ತೆರಿಗೆ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು ಮಾರಾಟ ಮಾಡಲಾಗುತ್ತಿದೆ.
ಬೆಂಗಳೂರಿನಲ್ಲಿ ಕೆಲವು ಆಸ್ತಿದಾರರು ಸಾವಿರಾರು ಕೋಟಿ ರೂಪಾಯಿ ಆಸ್ತಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದಾರೆ. ಈ ರೀತಿ ಆಸ್ತಿ ಬಾಕಿ ಉಳಿಸಿಕೊಂಡಿರುವವರು ಇನ್ನು ಎರಡು ದಿನದ ಒಳಗಾಗಿ ಆಸ್ತಿ ತೆರಿಗೆಯನ್ನು ಪಾವತಿ ಮಾಡದೆ ಇದ್ದರೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳಲಿದ್ದಾರೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ.
ಬಿಬಿಎಂಪಿಗೆ ಕೋಟ್ಯಾಂತರ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿದಿದೆ. ಆದರೆ ಹಲವು ಆಸ್ತಿದಾರರು ಆಸ್ತಿ ತೆರಿಗೆ ಬಾಕಿಯನ್ನು ಪಾವತಿ ಮಾಡದೆ ಇರುವುದರಿಂದ ಬಿಬಿಎಂಪಿಗೆ ಆದಾಯ ಕೊರತೆ ಹಾಗೂ ಆದಾಯ ಬರುವುದು ಕಡಿಮೆಯಾಗುತ್ತಿದೆ. ಇದೀಗ ಇದನ್ನು ತಪ್ಪಿಸುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕೆಲವೊಂದು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈಚೆಗೆ ಬೆಂಗಳೂರಿನ 600ಕ್ಕೂ ಹೆಚ್ಚು ಆಸ್ತಿಗಳನ್ನು ಹರಾಜು ಹಾಕುವುದಾಗಿ ಬಿಬಿಎಂಪಿ ಹೇಳಿತ್ತು. ಇದೀಗ ಈ ಆಸ್ತಿದಾರರಿಗೆ ನೀಡಿದ್ದ ಗಡುವು ಮುಕ್ತಾಯವಾಗುವುದಕ್ಕೆ ಬಂದಿದ್ದು. ಆಸ್ತಿ ಪಾವತಿ ಮಾಡದೆ ಇರುವವರು ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕದಲ್ಲಿ ಇದ್ದಾರೆ. ಬೆಂಗಳೂರಿನ ಈ ಭಾಗದ ಆಸ್ತಿಗಳ ಹರಾಜಿಗೆ ಇನ್ನು ಕೇವಲ 2 ದಿನಗಳು ಮಾತ್ರ ಬಾಕಿ ಉಳಿದಿವೆ
ಬಿಬಿಎಂಪಿಗೆ ಹೆಚ್ಚು ಆದಾಯ ಹರಿದು ಬರುವುದೇ ಕೆಲವು ನಿರ್ದಿಷ್ಟ ವಲಯಗಳಿಂದ ಅದರಲ್ಲೂ ಆಸ್ತಿ ತೆರಿಗೆಯಿಂದ ಕೋಟ್ಯಾಂತರ ರೂಪಾಯಿ ಹರಿದು ಬರುತ್ತದೆ. ಆದರೆ ಕಳೆದ ಹಲವು ವರ್ಷಗಳಿಂದ ಕೆಲವರು ಆಸ್ತಿ ತೆರಿಗೆಯನ್ನೇ ಪಾವತಿ ಮಾಡಿಲ್ಲ. ಈ ರೀತಿ ದೀರ್ಘಕಾಲದ ಆಸ್ತಿ ಬಾಕಿ ಉಳಿಸಿಕೊಂಡವರಿಗೆ ನೋಟಿಸ್ ಕೊಡಲಾಗಿತ್ತು. ಇದೀಗ ಈ ಆಸ್ತಿಗಳ ಹರಾಜು ಪ್ರಕ್ರಿಯೆಯನ್ನು ಫೆಬ್ರವರಿ 13ರಿಂದ ಶುರು ಮಾಡುವುದಾಗಿ ಬಿಬಿಎಂಪಿ ಹೇಳಿತ್ತು. ಇದಕ್ಕೆ ಕೇವಲ ಎರಡು ದಿನಗಳು ಮಾತ್ರ ಬಾಕಿ ಉಳಿದಿವೆ.
ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 608 ಆಸ್ತಿಗಳಿಂದ ದೀರ್ಘಕಾಲದ ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು ಮಾರಾಟ ಮಾಡುವುದಕ್ಕೆ ನಿರ್ಧರಿಸಿದೆ. ಇದರ ಪ್ರಕ್ರಿಯೆಗೆ ಕೊನೆಯ ಎಚ್ಚರಿಕೆಯನ್ನು ನೀಡಲಾಗಿದೆ. ಇನ್ನು ಎರಡು ದಿನಗಳ ಒಳಗಾಗಿ ಆಸ್ತಿ ತೆರಿಗೆ ಬಾಕಿಯನ್ನು ಪಾವತಿ ಮಾಡದೆ ಇದ್ದರೆ ಆಸ್ತಿಯನ್ನು ಹರಾಜು ಹಾಕುವುದಾಗಿ ಬಿಬಿಎಂಪಿಯು ಕೊನೆಯ ಎಚ್ಚರಿಕೆಯನ್ನು ಕೊಟ್ಟಿದೆ.
ವಲಯ – ಹರಾಜು ಆಸ್ತಿಗಳ ಸಂಖ್ಯೆ
1. ಪೂರ್ವ ವಲಯ – 118
2. ಪಶ್ಚಿಮ ವಲಯ – 120
3. 3. ದಕ್ಷಿಣ ವಲಯ – 109
4. ಮಹದೇವಪುರ ವಲಯ – 60
5. ಬೊಮ್ಮನಹಳ್ಳಿ ವಲಯ – 70
6. ಯಲಹಂಕ ವಲಯ – 40
7. ಆರ್.ಆರ್ ನಗರ ವಲಯ – 50
8. ದಾಸರಹಳ್ಳಿ ವಲಯ – 41
ಒಟ್ಟು: 608
ಯಾವ ವಲಯದಲ್ಲಿ ಯಾವಾಗ ಹರಾಜು ಪ್ರಕ್ರಿಯೆ ಶುರು
* ಪೂರ್ವ ವಲಯ 13ನೇ ಫೆಬ್ರವರಿ
* ಪಶ್ಚಿಮ ವಲಯ 13ನೇ ಫೆಬ್ರವರಿ
* ದಕ್ಷಿಣ ವಲಯ 14ನೇ ಫೆಬ್ರವರಿ
* ಮಹದೇವಪುರ ವಲಯ 13ನೇ ಫೆಬ್ರವರಿ
* ಬೊಮ್ಮನಹಳ್ಳಿ ವಲಯ 14ನೇ ಫೆಬ್ರವರಿ
* ಯಲಹಂಕ ವಲಯ 13ನೇ ಫೆಬ್ರವರಿ
ಹಾಗೂ ದಾಸರಹಳ್ಳಿ ವಲಯದಲ್ಲಿ 13ನೇ ಫೆಬ್ರವರಿ 2025 ರಂದು ಹರಾಜು ಮಾಡಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ.