ಬೆಂಗಳೂರು: ಮರಾಠಿ ಪುಂಡರ ಹಾವಳಿ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
IPL 2025: ಇಂದು ಆರ್ಸಿಬಿ- ಕೆಕೆಆರ್ ಮೊದಲ ಫೈಟ್: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೇಗಿರಲಿದೆ?
ಬೆಂಗಳೂರಿನ ಹೆಬ್ಬಾಳ ದಿಂದ ಕೆಆರ್ ಪುರಂ ಭಾಗದ ಕಡೆ ಸಂಚರಿಸುವರರಿಗೆ ಹಾಗೂ ಇತರ ಪ್ರಮುಖ ಪ್ರದೇಶಗಳವರಿಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಎಂದಿನಂತೆಯೇ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್, ಆಟೋ, ಓಲಾ, ಉಬರ್ ಸಂಚಾರ ನಡೆಸುತ್ತಿವೆ.
ಪ್ರತಿಭಟನಾಕಾರರು ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿರುವ ಕಾರಣ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. 1 ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ಕಾವು ಹೆಚ್ಚಾಗುವ ಸಾಧ್ಯತೆ ಇದ್ದು, ಭದ್ರತೆಗೆ 100 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಓರ್ವ ಎಸಿಪಿ, ಇಬ್ಬರು ಇನ್ಸ್ಪೆಕ್ಟರ್, 6 ಸಬ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ.
ಬೆಳಗಾವಿ ನಗರದಲ್ಲಿ ಬಂದ್ ಬಿಸಿ ಕಾಣಿಸಿಲ್ಲ. ನಗರದಲ್ಲಿ ಶನಿವಾರ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ಆರಂಭವಾಗಿದೆ. ಎಲ್ಲಾ ಅಂಗಡಿ ಮುಂಗಟ್ಟುಗಳು ತೆರೆದಿವೆ. ಈ ಮಧ್ಯೆ, ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲು ಕರವೇ ನಿರ್ಧರಿಸಿದೆ.