ಬೆಂಗಳೂರು:- ಒಂದೆಡೆ ಕರ್ನಾಟಕ ಬಂದ್ ನಡೆಯುತ್ತಿದ್ದರೆ, ಮತ್ತೊಂದೆಡೆ SSLC ವಿಧ್ಯಾರ್ಥಿಗಳು ಪರೀಕ್ಷೆ ಬಗ್ಗೆ ಫುಲ್ ಟೆನ್ಷನ್ ನಲ್ಲಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಪೂರ್ವ ನಿಗದಿಯಂತೆ ಮೌಲ್ಯಾಂಕನ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ 4, 5, 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಪರೀಕ್ಷೆ ನಡೆಯಲಿದೆ. ಒಂದು ವೇಳೆ ಬಂದ್ನಿಂದ ತೀರಾ ಅಡಚಣೆಯಾದರೆ ಮಾತ್ರ ಪರೀಕ್ಷೆ ಸಮಯ ಅಥವಾ ದಿನ ಬದಲಾಗಲಿದೆ.
ಮಾರ್ಚ್ 21ರಿಂದ ರಾಜ್ಯದಲ್ಲಿ SSLC ಪರೀಕ್ಷೆ ಶುರುವಾಗಿದೆ. ಇತ್ತ 4, 5, 6 ಮತ್ತು 7ನೇ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿವೆ. ಈ ಮಧ್ಯೆ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೋರಾಟಗಾರರು ಪ್ರತಿಭಟನೆಗೆ ಇಳಿದಿದ್ದಾರೆ.