ಮಡಿಕೇರಿ:-ಜಿಲ್ಲೆಯ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ಸಾಲಬಾಧೆಯಿಂದ ಖಿನ್ನತೆಗೆ ಒಳಗಾಗಿ ವ್ಯಕ್ತಿಯೋರ್ವ ಸೂಸೈಡ್ ಮಾಡಿಕೊಂಡ ಘಟನೆ ಜರುಗಿದೆ.
Darshan: ರಾಜಸ್ಥಾನದಲ್ಲಿ ದರ್ಶನ್ ಅಭಿನಯದ “ದಿ ಡೆವಿಲ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ!
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು 55 ವರ್ಷದ ರಂಜು ಎಂದು ಗುರುತಿಸಲಾಗಿದೆ. ರಂಜು ತಿಮ್ಮಯ್ಯ ಅವರು ಸಾಲಬಾಧೆಯಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದಾಗಿ ಮಾ. 25ರಂದು ಬೆಳಗ್ಗೆ ನೆಲಜಿ ಗ್ರಾಮದ ತಮ್ಮ ಮನೆ ಸಮೀಪದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ರಂಜು ತಿಮ್ಮಯ್ಯ ಅವರ ಪತ್ನಿ ತಾರಾಮಣಿ ಅವರು ನೀಡಿದ ದೂರಿನ ಅನ್ವಯ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.