ರಾಮನಗರ: ಡಿಸಿಎಂ ಆಗಿ ಮುಂದುವರೆಯುವ ನೈತಿಕತೆ ಡಿಕೆಶಿಗೆ ಇಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ದಲಿತರ ಹಣವನ್ನ ಸರ್ಕಾರ ತಿಂದು ಹಾಕುತ್ತಿದೆ. ದಲಿತರಿಗೆ ಸರ್ಕಾರ ಅನ್ಯಾಯ ಮಾಡುತ್ತಿದ್ದರೂ ಕಾಂಗ್ರೆಸ್ ದಲಿತ ಸಚಿವರು, ಶಾಸಕರು ಬಾಯಿ ಬಿಡುತ್ತಿಲ್ಲ.
ಇಂತಹ ಗುಲಾಮಗಿರಿಯನ್ನ ನಾನು ಎಲ್ಲಿಯೂ ನೋಡಿಲ್ಲ. ದಲಿತರ ಹಣ, ದಲಿತರಿಗೆ ಮೀಸಲಾಗಿ ಇಡಬೇಕು. ಗ್ಯಾರಂಟಿಗಾಗಿ ದಲಿತರ ಹಣ ಬಳಸಿಕೊಳ್ಳಲಾಗಿದೆ. ಅಲ್ಲದೇ ಧರ್ಮಾಧಾರಿತ ಮೀಸಲಾತಿ ಸಂವಿಧಾನ ವಿರೋಧಿ. ಡಿಸಿಎಂ ಡಿಕೆಶಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂದಿದ್ದಾರೆ.
ಈ ಬಣ್ಣದ ಬೆಕ್ಕು ನಿಮ್ಮ ಮನೆಗೆ ಬಂದರೆ ಅದೃಷ್ಟ ಕೈಹಿಡಿಯುವ ಮುನ್ಸೂಚನೆಯಂತೆ..!
ಸಂವಿಧಾನ ಬದಲಿಸಿ ಧರ್ಮಾಧಾರಿತ ಮೀಸಲಾತಿ ಕೊಡುತ್ತೇವೆ ಎನ್ನುತ್ತಾರೆ. ಅಂಬೇಡ್ಕರ್ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರು ಇದನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಡಿಸಿಎಂ ಆಗಿ ಮುಂದುವರೆಯುವ ನೈತಿಕತೆ ಡಿಕೆಶಿಗೆ ಇಲ್ಲ. ಸಿಎಂ ಸಿದ್ದರಾಮಯ್ಯ ಕೂಡಲೇ ಡಿಕೆಶಿಯನ್ನ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.