ಬೆಂಗಳೂರು: ಗೋಬಿ ಆಯ್ತು, ಪಾನಿಪುರಿ ಆಯ್ತು, ಕಬಾಬ್ ಆಯ್ತು, ಕಾಟನ್ ಕ್ಯಾಂಡಿನೂ ಆಯ್ತು, ಬಟಾಣಿಯೂ ಆಯ್ತು. ಇದೀಗ ಪನ್ನೀರ್ ಮತ್ತು ಸಿಹಿ ತಿಂಡಿಗಳ ಸರದಿ. ಇತ್ತೀಚೆಗೆ ಇಡ್ಲಿ, ಬಟಾಣಿಗಳಲ್ಲಿ ಕಲಬೆರಕೆ ಪತ್ತೆಯಾದ ಬೆನ್ನಲ್ಲೇ, ಈಗ ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಪನ್ನೀರ್ ಮತ್ತು ಸಿಹಿ ತಿಂಡಿಗಳ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಕಣ್ಣು ನೆಟ್ಟಿದ್ದು,
ಈ ಬಣ್ಣದ ಬೆಕ್ಕು ನಿಮ್ಮ ಮನೆಗೆ ಬಂದರೆ ಅದೃಷ್ಟ ಕೈಹಿಡಿಯುವ ಮುನ್ಸೂಚನೆಯಂತೆ..!
ಪನ್ನೀರ್ ಸೇರಿ ಇತರೆ ಆಹಾರ ಉತ್ಪನ್ನಗಳ ಸ್ಯಾಂಪಲ್ ಪಡೆದು ಟೆಸ್ಟ್ಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಪನ್ನೀರ್ನಲ್ಲಿ ಬ್ಯಾಕ್ಟೀರಿಯಾ ಅಂಶಗಳು ಪತ್ತೆಯಾಗಿರುವುದು ದೃಢವಾಗಿದೆ. ಆ ಮೂಲಕ ಪನ್ನೀರ್ ಪ್ರಿಯರಿಗೆ ಆಹಾರ ಇಲಾಖೆ ಶಾಕ್ ನೀಡಿದೆ. ಉಳಿದ ಸ್ಯಾಂಪಲ್ಗಳ ವರದಿಗಾಗಿ ಆಹಾರ ಇಲಾಖೆ ಕಾಯುತ್ತಿದೆ.
ಪನ್ನೀರ್ನಲ್ಲಿ ಅಸುರಕ್ಷಿತ ಅಂಶ ಪತ್ತೆ
ಕಲಬೆರಕೆ ಹಿನ್ನೆಲೆ ಕಳೆದ ಹಲವು ದಿನಗಳ ಹಿಂದೆ ಬೆಂಗಳೂರು ಸೇರಿ ಹಲವೆಡೆ ಆಹಾರ ಇಲಾಖೆ ಪನ್ನೀರ್ ಸ್ಯಾಂಪಲ್ ಸಂಗ್ರಹಿಸಿತ್ತು. ಆಹಾರ ಗುಣಮಟ್ಟ ಇಲಾಖೆಯಿಂದ ಪನೀರ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಇದೀಗ ಲ್ಯಾಬ್ ರಿಪೋರ್ಟ್ ಆಹಾರ ಇಲಾಖೆ ಕೈಸೇರಿದೆ. ವರದಿಯಲ್ಲಿ ಅಸುರಕ್ಷಿತ ಅಂಶ ಇರೋದು ಪತ್ತೆ ಆಗಿದೆ. 231 ಪನೀರ್ ಸ್ಯಾಂಪಲ್ ಪೈಕಿ 17 ಸ್ಯಾಂಪಲ್ಗಳ ವರದಿ ಬಂದಿದೆ. 17 ಸ್ಯಾಂಪಲ್ ಲ್ಯಾಬ್ ರಿಪೋರ್ಟ್ನಲ್ಲಿ 2 ಅನ್ ಸೇಫ್ ಎಂದು ವರದಿ ಬಂದಿದ್ದು, ಪನ್ನೀರ್ನಲ್ಲಿ ಬ್ಯಾಕ್ಟೀರಿಯಾ ಅಂಶ ಇರೋದು ವರದಿಯಲ್ಲಿ ಉಲ್ಲೇಖಿಸಲಾಗಿದೆ.