ಕುಂದಾಪುರ: ಭಕ್ತರು ಯಾವುದೇ ದೇವಾಲಯ, ದೈವಸ್ಥಾನಗಳಿಗೆ ಹೋದಾಗಲೂ ತಮಗೆ ಬೇಕಾದ ಪ್ರಾರ್ಥನೆ, ಆಸೆಗಳನ್ನು ಈಡೇರಿಸುವಂತೆ ಬೇಡಿಕೊಳ್ಳುತ್ತಾರೆ. ದೇವರ ಮುಂದೆ ಹೋಗಿ ಭಕ್ತರು ಏನೇನೋ ಕೇಳುತ್ತಾರೆ. ಇದೀಗ ಇಂಥದ್ದೇ ಬೇಡಿಕೆಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕುಂದಾಪುರದ ಹೊಳ ಮಗ್ಗಿ ಹೊರ ಬೊಬ್ಬರ್ಯ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ವಿದ್ಯಾರ್ಥಿಯೊಬ್ಬ ನನ್ನನ್ನು ಜಸ್ಟ್ ಪಾಸ್ ಮಾಡು ಎಂದು ಚೀಟಿ ಬರೆದು ದೇವರಿಗೆ ಮಾಡಿದ್ದಾನೆ. ದೈವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಯುವ ವೇಳೆ ವಿದ್ಯಾರ್ಥಿ ಜಸ್ಟ್ ಪಾಸ್ ಮಾಡುವಂತೆ ಕೋರಿದ್ದ ಚೀಟಿ ಲಭ್ಯವಾಗಿದ್ದು, ಇದರ ಫೋಟೋ ಇದೀಗ ಭಾರೀ ವೈರಲ್ ಆಗುತ್ತಿದೆ.
ಈ ಬಣ್ಣದ ಬೆಕ್ಕು ನಿಮ್ಮ ಮನೆಗೆ ಬಂದರೆ ಅದೃಷ್ಟ ಕೈಹಿಡಿಯುವ ಮುನ್ಸೂಚನೆಯಂತೆ..!
ಈ ಕುರಿತ ಫೋಟೋವನ್ನು Namma Kundapura ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಶೇರ್ ಮಾಡಲಾಗಿದೆ. ಈ ಚೀಟಿ ಫೋಟೋದಲ್ಲಿ “ಪರೀಕ್ಷೆಯಲ್ಲಿ ನನಗೆ ಇಷ್ಟು ಮಾರ್ಕ್ ಬರಬೇಕು ದೇವರೇ ಹೊರ ಬೊಬ್ಬರ್ಯ; ಗಣಿತ- 39, 38, 37, 36, ಇಂಗ್ಲೀಷ್- 39, 38, 37,
ಕನ್ನಡ- 40, 39 ವಿಜ್ಞಾನ- 39, 38, ಹಿಂದಿ- 40, 39, ಸಮಾಜ ವಿಜ್ಞಾನ- 38, 37 ಮತ್ತೆ ಇದಕ್ಕಿಂತ ಕಡಿಮೆ ಅಂಕ ಬೇಡ ದೇವರೆ” ಎಂದು ಪರೀಕ್ಷೆಯಲ್ಲಿ ಜಸ್ಟ್ ಪಾಸ್ ಮಾಡಿಸುವಂತೆ ಮನವಿ ಮಾಡಿದ್ದಾನೆ. ಸದ್ಯ ಈ ಚೀಟಿ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.