ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದ್ದು, ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದ ಯತ್ನಾಳ್ಗೆ ಬಿಜೆಪಿ ಹೈಕಮಾಂಡ್‌ನಿಮದ ಶೋಕಾಸ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.
ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಇದೀಗ ದೆಹಲಿ ಬಿಜೆಪಿ ಹೈಕಮಾಂಡ್‌ಗೆ ಅವರ ಉತ್ತರದಿಂದ ಸೂಕ್ತ ಉತ್ತರ ಸಿಕ್ಕಿಲ್ಲವೆಂದು ಶಾಸಕ ಬಸನಗೌಡ ಪಾಟೀಲ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಇನ್ನು ಅವರ ಶಾಸಕ ಸ್ಥಾನಕ್ಕೂ ಕುತ್ತು ಬರುತ್ತಾ ಎಂಬ ಪ್ರಶ್ನೆ ಶುರುವಾಗಿದೆ.
ಶಾಸಕ ಸ್ಥಾನದಲ್ಲಿ ಅವರು ಸ್ವತಂತ್ರವಾಗಿ ಮುಂದುವರೆಯಬಹುದು. ಒಂದು ವೇಳೆ ಪಕ್ಷದ ಚಿಹ್ನೆಯಡಿ ಗೆದ್ದಿರುವುದು ತನಗೆ ಬೇಡವೆಂದು ರಾಜೀನಾಮೆ ಕೊಟ್ಟರೆ, ಶಾಸಕ ಸ್ಥಾನ ರದ್ದಾಗಿ ಪುನಃ ಚುನಾವಣೆಗೆ ಹೋಗಬಹುದು.
ಈ ಬಣ್ಣದ ಬೆಕ್ಕು ನಿಮ್ಮ ಮನೆಗೆ ಬಂದರೆ ಅದೃಷ್ಟ ಕೈಹಿಡಿಯುವ ಮುನ್ಸೂಚನೆಯಂತೆ..!
ಬಿಜೆಪಿ ಶಾಸಕ ಯತ್ನಾಳ್ ಸದಾ ಪಕ್ಷದ ಬಗ್ಗೆ ಆಗಲಿ, ನಾಯಕರ ಬಗ್ಗೆ ಆರೋಪಗಳನ್ನು ಮಾಡುತ್ತಲೇ ಇದ್ದರು. ಅದರಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಆಕ್ರೋಶ ಹೊರಹಾಕುತ್ತಲೇ ಇದ್ದರು. ಇದೀಗ ಬಸನಗೌಡ ಪಾಟೀಲ್ ಅವರನ್ನು ಬಿಜೆಪಿ ಹೈಕಮಾಂಡ್ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದೆ.