ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಮಧ್ಯೆ ದಿನಸಿ, ತರಕಾರಿ ಬೆಲೆ ಗಗನಕ್ಕೇರಿವೆ. ಇದರ ನಡುವೆ ಇದೀಗ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ವಾಸ್ತು ಪ್ರಕಾರ ಈ ದಿಕ್ಕಿನಲ್ಲಿ ಮಲಗಿ: ಜೀವನದಲ್ಲಿ ಅನಿರೀಕ್ಷಿತ ಅದೃಷ್ಟ ನಿಮ್ಮದಾಗುತ್ತೆ.!
ಹೌದು ಪ್ರತಿ ಲೀಟರ್ ನಂದಿನಿ ಹಾಲಿನ ದರ 4 ರೂ. ಹೆಚ್ಚಳ ಮಾಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ನಾಳೆಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.
ಯಾವ ಹಾಲಿನ ದರ ಎಷ್ಟಾಗಬಹುದು?
– ನೀಲಿ ಪ್ಯಾಕೆಟ್ ಹಾಲು – 44 ರೂ ನಿಂದ 48 ರೂ
– ಆರೆಂಜ್ ಪ್ಯಾಕೆಟ್ ಹಾಲು – 54 ರೂ. ನಿಂದ 58 ರೂ.
– ಸಮೃದ್ಧಿ ಹಾಲಿನ ಪ್ಯಾಕೆಟ್ 56 ರೂ. ನಿಂದ 60 ರೂ.
– ಗ್ರೀನ್ ಸ್ಪೇಷಲ್ 54 ರೂ. ನಿಂದ 58 ರೂ.
– ನಾರ್ಮಲ್ ಗ್ರೀನ್ 52 ರೂ. ನಿಂದ 56 ರೂ.
6-8 ರೂ. ಹಾಲಿನ ದರ ಹೆಚ್ಚಳಕ್ಕೆ ಒಕ್ಕೂಟಗಳು ಪ್ರಸ್ತಾಪಿಸಿದ್ದವು. ಆದರೆ ಸೋಮವಾರ ನಡೆದ ಸಭೆಯಲ್ಲಿ ಸಿಎಂ ಈ ದರಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಹಾಲಿನ ದರ ಹೆಚ್ಚಳ ಹಣ ಕೇವಲ ರೈತರಿಗಷ್ಟೇ ಇರಲಿ ಎಂದಿದ್ದರು. ಆದರೆ ಸಭೆಯ ಬಳಿಕ 5 ರೂ.ಯಾದರೂ ಹೆಚ್ಚಳ ಮಾಡಿ, ಅದರಲ್ಲಿ 3 ರೂ. ರೈತರಿಗೆ, 2 ರೂ. ಒಕ್ಕೂಟಗಳಿಗೆ ಇರಲಿ ಎಂದು ಪ್ರಸ್ತಾಪಿಸಿದ್ದರು. ಆದ್ರೆ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ 4 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ.