ರಾಮನಗರ : ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ದುರ್ಮರಣಕ್ಕೀಡಾಗಿದ್ದಾರೆ.
ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯ ಸರ್ವೀಸ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ. ಕ್ಯಾಂಟರ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮರಕ್ಕೆ ಕಾರು ಡಿಕ್ಕಿ ; ಯತ್ನಾಳ್ ಬೆಂಬಲಿಸಿ ರಾಜೀನಾಮೆ ನೀಡಿದ್ದ ಪದಾಧಿಕಾರಿ ಮೃತ್ಯು
ಮೃತರನ್ನು ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಶಿವಪ್ರಕಾಶ್, ಪುಟ್ಟಗೌರಮ್ಮ, ಶಿವರತ್ನ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.