ಬೆಂಗಳೂರು:- ರಾಜಣ್ಣ ಹಾಗೂ ಪುತ್ರ ರಾಜೇಂದ್ರಗೆ ಸರ್ಕಾರ ಸೂಕ್ತ ಭದ್ರತೆ ಕೊಡಿ ಎಂದು ಎನ್.ರವಿಕುಮಾರ್ ಆಗ್ರಹ ಮಾಡಿದ್ದಾರೆ.
ಗ್ಯಾರಂಟಿ ಉಚಿತ, ಬೆಲೆ ಏರಿಕೆ ಖಚಿತ: ಹಾಲಿನ ಬೆಲೆ ಏರಿಕೆಗೆ ಸುರೇಶ್ ಕುಮಾರ್ ಹಿಂಗಂದ್ರೂ!
ಈ ಸಂಬಂಧ ಮಾತನಾಡಿದ ಅವರು, ಹನಿಟ್ರ್ಯಾಪ್ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದೆ. ಇದರ ಸಮಗ್ರ ತನಿಖೆಗೆ ಸಿಬಿಐ ಅಥವಾ ನ್ಯಾಯಾಂಗ ತನಿಖೆ ಆಗಲಿ.
ಹನಿಟ್ರ್ಯಾಪ್ ಬದಲು ಕೊಲೆ ಮಾಡಲು ಬಂದಿದ್ದರು ಎಂದು ಪರಿಷತ್ ಸದಸ್ಯ ರಾಜೇಂದ್ರ ಆರೋಪಿಸಿದ್ದರು. ಈ ಹನಿಟ್ರ್ಯಾಪ್ ಹಿಂದೆ ಯಾರ್ಯಾರಿದ್ದಾರೆ? ಯಾರ್ಯಾರನ್ನು ಬಲಿ ತೆಗೆದುಕೊಳ್ಳುವ ವಿಚಾರ ಇದೆ ಎಂಬುದು ಬಹಿರಂಗ ಆಗಬೇಕಿದೆ. ರಾಜಣ್ಣ ಇರಬಹುದು, ಅವರ ಮಗ ರಾಜೇಂದ್ರರ ಕೊಲೆ ಯತ್ನದ ಹೇಳಿಕೆ ಏನಿದೆಯೋ ಅದು ಗಂಭೀರ ವಿಚಾರ ಎಂದು ಹೇಳಿದರು.
ಸರ್ಕಾರ ಕೂಡಲೇ ರಾಜೇಂದ್ರ ಅವರಿಗೆ ಭದ್ರತೆ ಒದಗಿಸಬೇಕು. ಸರ್ಕಾರದ ಒಳಗೆ ಏನು ನಡೆಯುತ್ತಿದೆ ಎಂದು ಪ್ರಶ್ನಿಸಿ, ಕಾಂಗ್ರೆಸ್ಸಿನ ಒಳಗೇ ಈ ಸ್ಥಿತಿ ಬಂದರೆ, ಬೇರೆ ಪಕ್ಷದ ನಾಯಕರ ಪರಿಸ್ಥಿತಿ ಏನು ಎಂಬುದನ್ನು ಕೂಡ ನಾವು ಗಂಭೀರವಾಗಿ ಯೋಚಿಸಬೇಕಿದೆ. ಹನಿಟ್ರ್ಯಾಪ್ ವಿಚಾರವನ್ನು ಸಿಬಿಐ ಅಥವಾ ಹಾಲಿ ಜಡ್ಜ್ ನೇತೃತ್ವದಲ್ಲಿ ತನಿಖೆ ಮಾಡಿಸಲು ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ರವಿಕುಮಾರ್ ಆಗ್ರಹಿಸಿದರು.