ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ಹೆಂಡತಿ ಯನ್ನು ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ತುಂಬಿ ಗಂಡ ಎಸ್ಕೇಪ್ ಆಗಿರುವ ಘಟನೆ ಜರುಗಿದೆ.
ಬಿಸಿಲು ಅಂತ ಐಸ್ ಕ್ರೀ ಹೆಚ್ಚು ಸೇವಿಸ್ತಿದ್ದೀರಾ!? ಹುಷಾರ್, ICe Cream ಪ್ರಿಯರು ನೋಡಲೇಬೇಕಾದ ಸ್ಟೋರಿ!
ಹುಳಿ ಮಾವು ಪೋಲಿಸ್ ಠಾಣಾ ವ್ಯಾಪ್ತಿಯ ದೊಡ್ಡಕಮ್ಮನಹಳ್ಳಿಯ ವಾಲ್ ಮಾರ್ಕ್ ಅಪಾರ್ಟ್ಮೆಂಟ್ ಮುಂಭಾಗ ಈ ಘಟನೆ ಜರುಗಿದೆ. ಕಳೆದು ಮೂರು ದಿನಗಳ ಹಿಂದೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಕ್ಕಪಕ್ಕದವರಿಗೆ ವಾಸನೆ ಬಂದ ಬಳಿಕ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಸೂಟ್ ಕೇಸ್ ಪರಿಶೀಲಿಸಿದರು. ಹುಳಿಮಾವು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಮಹಾರಾಷ್ಟ್ರ ಮೂಲದ ದಂಪತಿ ಕಳೆದ ಮೂರು ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಕೊಲೆ ನಡೆಯಲು ಕಾರಣ ಇನ್ನೂ ತಿಳಿದು ಬಂದಿಲ್ಲ. ಪೊಲೀಸ್ ತನಿಖೆ ಬಳಿಕ ತಿಳಿದು ಬರಲಿದೆ.