ಹುಬ್ಬಳ್ಳಿ; ರಾಜ್ಯದಲ್ಲಿ ಬಿಸಿಲು ಜಾಸ್ತಿಯಾಗಿದೆ. ಕುಡಿಯೋ ನೀರಿನ ನಿರ್ವಹಣೆ ಮಹತ್ವದ ಕೆಲಸ. ಆದ್ದರಿಂದ ಸಚಿವ ಸಂಪುಟದಲ್ಲಿ ಮಹತ್ವದ ಚರ್ಚೆಯಾಗಿದೆ. ರಾಜ್ಯದ ಜಲಾಶಯಗಳಿಂದ ನೀರಿನ ಬಿಡುಗಡೆ ಕುರಿತು ಚರ್ಚೆಯಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯೋ ನೀರಿನ ನಿರ್ವಹಣೆ ಬಗ್ಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆಯಾಗಲಿದ್ದು, ಒಂದು ವಾರದೊಳಗೆ ಚರ್ಚೆ ಮಾಡಿ ಸೂಕ್ತ ನಿರ್ದೇಶನ ನೀಡಲಿದ್ದಾರೆ ಎಂದರು.
ಹಾಲಿನ ದರ ಕರೆಂಟ್ ದರ ಹೆಚ್ಚಳಕ್ಕೆ ಪಾಟೀಲ್ ಸಮರ್ಥನೆ
ದೇಶದ ಯಾವುದೇ ರಾಜ್ಯ ನೋಡಿ, ನಮ್ಮ ರಾಜ್ಯದಲ್ಲಿ ಐದು ರೂಪಾಯಿ ಕಡಿಮೆ ಇದೆ. ರೈತರ ಬೇಡಿಕೆ ಗಮನಿಸಿ,ಎಷ್ಟು ಕಡಿಮೆ ಸಾಧ್ಯವೋ,ಅಷ್ಟು ಹೆಚ್ಚು ಮಾಡಿದ್ದೇವೆ. ಹೆಚ್ಚಳ ಮಾಡಿರೋ 4 ರೂಪಾಯಿ ರೈತರಿಗೆ ಹೋಗತ್ತೆ ಎಂದರು.
ಮುಸ್ಲಿಂ ಮೀಸಲಾತಿ ವಿಚಾರ
ಮುಸಲ್ಮಾನರಿಗೆ ಮೀಸಲಾತಿ ವಿಚಾರವಾಗಿ ಬಿಜೆಪಿಯವರು ಅಫಡವಿಟ್ ಕೊಟ್ಟಿದ್ದಾರೆ. ಬಿಜೆಪಿಯವರು ಇದನ್ನ ರಾಜಕೀಯ ವಿಷಯವಾಗಿ ಮಾಡ್ತೀದಾರೆ ಎಂದರು.