Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಏ.5 ಮತ್ತು 6ಕ್ಕೆ ನವರಸನ್ ನೇತೃತ್ವದ ʼಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್ʼ ಶುರು

    By Author AINMarch 28, 2025
    Share
    Facebook Twitter LinkedIn Pinterest Email
    Demo

    ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಇವೆಂಟ್ ಗಳನ್ನು ಆಯೋಜಿಸುವ ಮೂಲಕ ಜನಪ್ರಿಯರಾಗಿರುವ ನವರಸನ್ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಆಯೋಜಿಸುವ ಮೂಲಕ ಕ್ರೀಡಾಲೋಕಕ್ಕೂ‌ ಪಾದಾರ್ಪಣೆ ಮಾಡಿರುವುದು ಎಲ್ಲರಿಗೂ ತಿಳಿದ ಸಂಗತಿ. ಕಳೆದ ಕೆಲವು ದಿನಗಳ ಹಿಂದೆ “CWKL” ಲೋಗೊ ಅನಾವರಣವನ್ನು ನವರಸನ್ ಅದ್ದೂರಿಯಾಗಿ ಬಿಡುಗಡೆ ಮಾಡಿದ್ದರು. ಪ್ರಸ್ತುತ ಹೆಸರಾಂತ ಗಾಯಕ, ನಾಯಕ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು “CWKL” ಗಾಗಿ “ಕಬ್ಬಡಿ ಕಬ್ಬಡಿ” ಎಂಬ ಚಂದದ ಥೀಮ್ ಸಾಂಗ್ ಬರೆದು ಸಂಗೀತ ಸಂಯೋಜಿಸಿದ್ದಾರೆ.

    ಇದೇ ಸಂದರ್ಭದಲ್ಲಿ “CWKL” ಪಂದ್ಯಗಳು ನಡೆಯುವ ದಿನಾಂಕಗಳನ್ನು ಸಹ ತಿಳಿಸಲಾಯಿತು. ವಿಧಾನ ಪರಿಷತ್ ಸದಸ್ಯರು ಹಾಗೂ‌ ಸಾಯಿಗೋಲ್ಡ್ ಸಂಸ್ಥೆಯ ಮಾಲೀಕರಾದ ಶರವಣ ಅವರು ಪಂದ್ಯಗಳು ನಡೆಯುವ ದಿನಾಂಕಗಳ ಬಗ್ಗೆ ತಿಳಿಸಿ, “CWKL” ಯಶಸ್ವಿಯಾಗಲೆಂದು ಶುಭ ಹಾರೈಸಿದರು. ಏಪ್ರಿಲ್ 5 ಹಾಗೂ 6  “CWKL”  ನ ಪಂದ್ಯಗಳು ನಡೆಯಲಿದೆ. ಥೀಮ್ ಸಾಂಗ್ ಅನ್ನು ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಬಿಡುಗಡೆ ಮಾಡಿದರು. “CWKL”  ತಂಡಗಳ ಮಾಲೀಕರಾದ ಸಾಯಿಗೋಲ್ಡ್ ಪ್ಯಾಲೆಸ್ ನ  ಶರವಣ,‌ “ವಾಮನ” ಚಿತ್ರದ ನಿರ್ಮಾಪಕ ಚೇತನ್ ಗೌಡ,‌ ನಿರ್ಮಾಪಕ ಸುರೇಶ್ ಗೌಡ, ನಿರ್ಮಾಪಕ ರಾಜೇಶ್ ಗೌಡ, ನಿರ್ಮಾಪಕ ಗೋವಿಂದರಾಜು ಹಾಗೂ ಗಜೇಂದ್ರ ಅವರು ಈ ಸಂದರ್ಭದಲ್ಲಿ  ಉಪಸ್ಥಿತರಿದ್ದರು. ಈ ಲೀಗ್ ನಲ್ಲಿ ಏಳು ತಂಡಗಳಿದ್ದು, ಏಳೂ ತಂಡಗಳ ನಾಯಕಿಯರು ಹಾಗೂ ಆಟಗಾರರು ಸಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಹಾಡು ಬಿಡುಗಡೆ ನಂತರ ಆಯೋಜಕರಾದ ನವರಸನ್ ಮಾತನಾಡಿದರು.

    ಕಳೆದ ಕೆಲವು ದಿನಗಳ ಹಿಂದಷ್ಟೇ “CWKL” ಲೋಗೊ ಅನಾವರಣ ಮಾಡುವ ಮೂಲಕ ಅದ್ದೂರಿ ಚಾಲನೆ ನೀಡಲಾಗಿತ್ತು. ಈಗಂತೂ ಎಲ್ಲೆಲ್ಲೂ ನಮ್ಮ “CWKL” ದೇ ಮಾತು. ನಾನು ಇತ್ತೀಚೆಗೆ ಬೇರೆ ಭಾಷೆಗಳ ಸಿನಿಮಾ ಇವೆಂಟ್ ಗಳಿಗೆ ಹೋದಾಗಲೂ ಅಲ್ಲಿನ ಸೆಲೆಬ್ರಿಟಿಗಳು ಹಾಗೂ ನಮ್ಮ ಕನ್ನಡದ ಸೆಲೆಬ್ರಿಟಿಗಳು “CWKL” ಬಗ್ಗೆ ಮೆಚ್ಚುಗೆ ಮಾತುಗಳಾಡಿದ್ದು ನನಗೆ ಬಹಳ ಖುಷಿಯಾಗಿದೆ. ಈ ಲೀಗ್ ಗಾಗಿ ಒಂದು ಹಾಡನ್ನು ಬರೆದು ಸಂಗೀತ ಸಂಯೋಜಿಸಿ ಕೊಡಿ ಎಂದು ಚಂದನ್ ಶೆಟ್ಟಿ ಅವರನ್ನು ಕೇಳಿದಾಗ ಅದ್ಭುತವಾದ ಥೀಮ್ ಸಾಂಗ್ ಬರೆದುಕೊಟ್ಟಿದ್ದಾರೆ. ಚಂದನ್ ಶೆಟ್ಟಿ ಅವರ ತಮ್ಮ ಪುನೀತ್ ಈಗಿನ AI ತಂತ್ರಜ್ಞಾನದ ಮೂಲಕ ಈ ಹಾಡನ್ನು ಸಿದ್ದ ಮಾಡಿಕೊಟ್ಟಿದ್ದಾರೆ.

    ನಮ್ಮ “CWKL” ನ ಮುಂದಿನ ಎಲ್ಲಾ ಕಾರ್ಯಕ್ರಮಗಳಲ್ಲೂ ಈ ಥೀಮ್ ಸಾಂಗ್ ಅನ್ನು ಬಳಸಿಕೊಳ್ಳಲಾಗುವುದು. ನಮ್ಮ ತಂಡಗಳ ಮಾಲೀಕರಾದ ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ,‌ “ವಾಮನ” ಚಿತ್ರದ ನಿರ್ಮಾಪಕ ಚೇತನ್ ಗೌಡ, ಸುರೇಶ್ ಗೌಡ, ರಾಜೇಶ್ ಗೌಡ, ಎ.ವಿ.ಅರ್ ಫಿಲಂಸ್ ನ ವೆಂಕಟೇಶ್ ರೆಡ್ಡಿ, ಗಜೇಂದ್ರ ಹಾಗೂ ಗೋವಿಂದರಾಜು ಅವರಿಗೆ, ನನಗೆ ಬೆನ್ನೆಲುಬಾಗಿ ನಿಂತಿರುವ ನನ್ನ ತಂಡಕ್ಕೆ ಹಾಗೂ ಈ ಲೀಗ್ ನಲ್ಲಿ ಭಾಗವಹಿಸುತ್ತಿರುವ ಎಲ್ಲಾ ಸೆಲೆಬ್ರಿಟಿ ನಟಿಯರಿಗೆ ನನ್ನ ಧನ್ಯವಾದ ಎಂದು ತಿಳಿಸಿದ ನವರಸನ್, ಏಪ್ರಿಲ್ 5 ಹಾಗೂ 6  ನಮ್ಮ “CWKL” ನ ಪಂದ್ಯಗಳು ಅದ್ದೂರಿಯಾಗಿ ನಡೆಯಲಿದೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ದೇಶದ ಜನಸಾಮಾನ್ಯರ ಏಕೈಕ ಆಶಾಕಿರಣ ಆಮ್ ಆದ್ಮಿ ಪಕ್ಷ: ಆತಿಷಿ ಸಿಂಗ್

    July 4, 2025

    ಎಲ್ಲಾ ತ್ಯಾಜ್ಯ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಿ: ತುಷಾರ್ ಗಿರಿನಾಥ್

    July 4, 2025

    ಕಾನೂನು ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

    July 4, 2025

    ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ರವಿಕುಮಾರ್ ವಿರುದ್ಧ ಸುರೇಶ್ ಗೌಡ ಕಿಡಿ

    July 4, 2025

    ರೆಟ್ರೋ ಲುಕ್‌ನಲ್ಲಿ ಧನಂಜಯ್..666 ಆಪರೇಷನ್ ಡ್ರೀಮ್ ಥಿಯೇಟರ್ ಚಿತ್ರದ ಫಸ್ಟ್‌ ಲುಕ್ ಅನಾವರಣ‌

    July 4, 2025

    TVK ಪಕ್ಷದ ಸಿಎಂ ಅಭ್ಯರ್ಥಿ ನಾನೇ ಎಂದ ದಳಪತಿ..ಬಿಜೆಪಿ ಜೊತೆ ಮೈತ್ರಿ ಇಲ್ಲ..ವಿಜಯ್‌ ಏಕ್‌ ಮಾರ್ ದೋ ತುಕ್ಡ್!‌

    July 4, 2025

    PUC, ಡಿಗ್ರಿ ಪಾಸಾಗಿದ್ಯಾ!? ಹಾಗಿದ್ರೆ ಇಲ್ಲಿದೆ ಭರ್ಜರಿ ಉದ್ಯೋಗವಕಾಶ! ಬೇಗ ಸಂದರ್ಶನಕ್ಕೆ ಹಾಜರಾಗಿ

    July 4, 2025

    Video.. ಬೆಂಗಳೂರಲ್ಲಿ ಕಾಲೇಜಿಗೆ ಹೋಗುತ್ತಿದ್ದ ಬಾಲಕನಿಗೆ BMTC ಬಸ್ ಡಿಕ್ಕಿ..! ಮುಂದೇನಾಯ್ತು..?

    July 4, 2025

    ಆಕ್ಷೇಪಾರ್ಹ ಹೇಳಿಕೆ: FIR ದಾಖಲಾಗುತ್ತಿದ್ದಂತೆಯೇ ಹೈಕೋರ್ಟ್ ಮೆಟ್ಟಿಲೇರಿದ ರವಿಕುಮಾರ್..!

    July 4, 2025

    ಕೊಟ್ಟ ಸಾಲ ವಾಪಸ್ಸು ಕೇಳಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಭೂಪ.! ಸಂಬಂಧಿಕರಿಂದಲೇ ಕೊಲೆಗೆ ಸ್ಕೆಚ್

    July 4, 2025

    ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ ʼಮಾಫಿಯಾʼ ಪೋಸ್ಟರ್‌ ಅನಾವರಣ

    July 4, 2025

    Bengaluru: ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ರೈತ ಹೋರಾಟಗಾರರು..!

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.