ಬೆಂಗಳೂರು: ಸಂವಿಧಾನ ಬದಲಾವಣೆ ಮಾಡ್ತೀನಿ ಎಂದಿರುವ ಡಿಕೆಶಿ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ ಎಸ್‌ಸಿ ಘಟಕದ ಅಧ್ಯಕ್ಷ ಮಾಜಿ ಶಾಸಕ ಅನ್ನದಾನಿ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ಗ್ಯಾರಂಟಿಗೆ ಬಳಕೆ ಮಾಡಿಕೊಂಡಿದ್ದಾರೆ. ಇದನ್ನ ಕೇಳಿದರೆ ಭಂಡ ಮಾತು ಆಡುತ್ತೀರಿ. ಕಾಂಗ್ರೆಸ್‌ನವರು ಮಾನ ಮರ್ಯಾದೆ ಇಟ್ಟುಕೊಂಡು ಮಾತಾಡಬೇಕು.
ಡಿಕೆಶಿ ಮನಸಿನಲ್ಲಿ ಇರೋದು ಬಾಯಲ್ಲಿ ಬಂದಿದೆ. ಅವರಿಗೆ ನಾಚಿಕೆ ಆಗಬೇಕು. ಕೂಡಲೇ ಹೇಳಿಕೆ ವಾಪಸ್ ತೆಗೆದುಕೊಂಡು ಕ್ಷಮೆ ಕೇಳಬೇಕು. ಡಿಕೆಶಿ ಅವರೇ ನಿಮ್ಮಿಂದ ಸಂವಿಧಾನ ಬದಲಾವಣೆ ಸಾಧ್ಯವಿಲ್ಲ. ದಲಿತರ ಹಣವನ್ನ ನುಂಗಿರುವುದು ಕಾಂಗ್ರೆಸ್. ಸಂವಿಧಾನ ಬದಲಾವಣೆ ಮಾಡ್ತೀನಿ ಎಂದಿರುವ ಡಿಕೆಶಿ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ವಾಸ್ತು ಪ್ರಕಾರ ಈ ದಿಕ್ಕಿನಲ್ಲಿ ಮಲಗಿ: ಜೀವನದಲ್ಲಿ ಅನಿರೀಕ್ಷಿತ ಅದೃಷ್ಟ ನಿಮ್ಮದಾಗುತ್ತೆ.!
ಈ ದೇಶದಲ್ಲಿ ಸಂವಿಧಾನವನ್ನು ಅಪಮಾನ ಮಾಡಿರುವುದು ಕಾಂಗ್ರೆಸ್. ದೇವೇಗೌಡರನ್ನ, ಅಡ್ವಾಣಿ, ಜೆಪಿ ಅವರನ್ನ ಜೈಲಿಗೆ ಹಾಕಿದ್ದೀರಿ. ಅಂಬೇಡ್ಕರ್ ಸಂವಿಧಾನ ಅಮಾನತು ಮಾಡಿ, ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಜಾರಿ ಮಾಡಿದರು. ಇದನ್ನ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.