ಬೆಂಗಳೂರು: ಪತ್ನಿ ಕೊಂದು ಬಳಿಕ ಅವರ ಶವವನ್ನು ತುಂಡಾಗಿ ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿ ಎಸ್ಕೇಪ್ ಆಗಿದ್ದ ಆರೋಪಿ ಪತಿಯನ್ನು ಮಹಾರಾಷ್ಟ್ರದಲ್ಲಿ ಅರೆಸ್ಟ್ ಮಾಡಲಾಗಿದೆ. ಇನ್ನೂ ಈ ವಿಚಾರವಾಗಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಮಾತನಾಡಿದ್ದಾರೆ. ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯ ಮನೆಯಲ್ಲಿ ಪತ್ನಿಯನ್ನು (ಗೌರಿ ಅನಿಲ್ ಸಾಂಬೆಕರ್) ಕೊಲೆ ಮಾಡಿ, ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿದ ಬಳಿಕ ಆರೋಪಿ ರಾಕೇಶ್ ಮಹಾರಾಷ್ಟ್ರಕ್ಕೆ ತೆರಳಿದ್ದ.
ಗುರುವಾರ ಆತ ಮುಂಬೈಗೆ ಹೋಗುತ್ತಿದ್ದಾಗ ಶಿರ್ವಾಲ್ ಪೊಲೀಸ್ ಠಾಣೆ ಸಮೀಪದಲ್ಲಿ ಅಸ್ವಸ್ಥನಾಗಿ ಬಿದ್ದಿದ್ದ. ನಂತರ ಸ್ಥಳಕ್ಕೆ ಧಾವಿಸಿದ್ದ ಅಲ್ಲಿನ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲು ಮಾಡಿಸಿದ್ದರು. ಸತಾರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು.
ವಾಸ್ತು ಪ್ರಕಾರ ಈ ದಿಕ್ಕಿನಲ್ಲಿ ಮಲಗಿ: ಜೀವನದಲ್ಲಿ ಅನಿರೀಕ್ಷಿತ ಅದೃಷ್ಟ ನಿಮ್ಮದಾಗುತ್ತೆ.!
ತಡರಾತ್ರಿ ಪುಣೆಯ ಸಸೂನ್ ಆಸ್ಪತ್ರೆಗೆ ರವಾನಿಸಲಾಯಿತು. ಈಗ ಪುಣೆಯ ಸಸೂನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಕೆ ಮಾಡಲಾಗಿದೆ. ಸಸೂನ್ ಆಸ್ಪತ್ರೆಗೆ ಹುಳಿಮಾವು ಪೊಲೀಸರ ತಂಡ ಭೇಟಿ ನೀಡಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ.
ಹುಳಿಮಾವು ಮಹಿಳೆಯ ಕೊಲೆ ಆರೋಪಿ ವಿಷ ಸೇವನೆ ಮಾಡಿದ್ದ ಬಗ್ಗೆ ಅನುಮಾನ ಇದೆ. ಸದ್ಯ ಆತನಿಗೆ ಚಿಕಿತ್ಸೆ ನೀಡಿಲಾಗುತ್ತಿದೆ. ಆಸ್ಪತ್ರೆಯ ವೈದ್ಯರ ಅಭಿಪ್ರಾಯ ಮತ್ತು ಚಿಕಿತ್ಸೆ ಬಳಿಕ ಆರೋಪಿಯನ್ನು ಬೆಂಗಳೂರಿಗೆ ಕರೆತರಬಹುದು ಎಂದು ಅವರು ತಿಳಿಸಿದ್ದಾರೆ. ಕೊಲೆಗೆ ಕೌಟುಂಬಿಕ ಕಾರಣ ಇರುವ ಬಗ್ಗೆ ಮಾಹಿತಿ ಇದೆ. ಇಷ್ಟೇ ಅಲ್ಲದೆ, ಬೇರೆ ಏನಾದರೂ ಕಾರಣ ಇದೆಯೇ ಎಂದು ಕುಟುಂಬದವರ ಬಳಿ ಮಾಹಿತಿ ಪಡೆಯಬೇಕು. ಈಗಾಗಲೇ ಕುಟುಂಬದವರು ಪೊಲೀಸರ ಬೇಟಿ ಮಾಡಿದ್ದಾರೆ. ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.