ವಿಜಯಪುರ : ಯತ್ನಾಳ್ ಉಚ್ಚಾಟನೆ ಖಂಡಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಮುದ್ದೇಬಿಹಾಳದಲ್ಲಿ ಪ್ರತಿಭಟನೆ ನಡೆಸಿದ ಯತ್ನಾಳ್ ಬೆಂಬಲಿಗರು, ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಒದಲ್ಲದೇ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಪ್ರತಿಭಟನೆ ನಡೆಯಿತು. ಪಂಚಮಸಾಲಿ ಸಮಾಜದ ಅಭಿಮಾನಿಗಳು ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರ ಅಭಿಮಾನಿಗಳು ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಅಲ್ಲದೇ ಬಿಎಸ್ವೈ, ವಿಜಯೇಂದ್ರ ಭಾವಚಿತ್ರಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಯತ್ನಾಳ್ ಉಚ್ಚಾಟನೆ ; ವಿಜಯಪುರ ಜಿಲ್ಲಾ ಬಿಜೆಪಿ ಕೋರ್ ಕಮೀಟಿಯಿಂದ ಠರಾವು ಪಾಸು
ಇದೇ ವೇಳೆ ಮಾತನಾಡಿದ ಪಂಚಮಸಾಲಿ ಸಮಾಜ ತಾಲ್ಲೂಕು ಹೋರಾಟ ಸಮಿತಿ ಅಧ್ಯಕ್ಷ ಶ್ರೀಕಾಂತ್ ಕೊಟ್ರಶೆಟ್ಟಿ, ಬಸನಗೌಡ ಪಾಟೀಲ್ ಯತ್ನಾಳ್ ಅವರು ಒಂದು ಸಮಾಜಕ್ಕೆ ಸೀಮಿತವಾಗದೆ ಇಡೀ ಹಿಂದೂ ಸಮಾಜಕ್ಕೆ ಶಕ್ತಿಯಾಗಿದ್ದಾರೆ. ಬಿಜೆಪಿ ಅವರನ್ನು ಹೊರಹಾಕಿದ್ದು ಖಂಡನೀಯ. ಮುಂದಿನ ದಿನಗಳಲ್ಲಿ ಯತ್ನಾಳ್ ಅವರ ಶಕ್ತಿ ಏನೆಂದು ತೋರಿಸುತ್ತೇವೆ ಎಂದರು.
ಪಂಚಮಸಾಲಿ ಸಮಾಜದ ವಿನಾಯಕರು ಮತ್ತು ಯತ್ನಾಳ್ ಅಭಿಮಾನಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.