ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬಳಿಕ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದಾರೆ. ಇಂದು ಅಮವಾಸ್ಯೆಯ ಪ್ರಯುಕ್ತ ಅವರು ನಗರದ ಶನಿಮಹಾತ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಸ್ಥಾನದಲ್ಲಿ ನಡೆದ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿದ್ದಾರೆ.
ಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು ಹೀಗೆ ಮಾಡಿ: ಈ 4 ಸ್ಥಳಗಳಲ್ಲಿ ದೀಪ ಹಚ್ಚುವುದನ್ನು ಮರೆಯಬೇಡಿ..!
ಸದ್ಯ ನಿನ್ನೆ ಅವರು ಮಾಜಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಮನೆಗೆ ಭೇಟಿ ನೀಡಿದ್ದರು. ಯತ್ನಾಳ್ ವಿರುದ್ಧ ಹೈಕಮಾಂಡ್ ತೆಗೆದುಕೊಂಡಿರುವ ಕ್ರಮದ ಬಗ್ಗೆ ಪುನರ್ ಪರಿಶೀಲನೆ ಮಾಡುವಂತೆ ಪತ್ರದ ಮೂಲಕ ಮನವಿ ಮಾಡಲು ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಮುಂದಿನ ನಡೆಯ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ.