ಮೈಸೂರು :- ನದಿಯಲ್ಲಿ ಈಜಲು ತೆರಳಲು ಹೋಗಿ ಇಬ್ಬರು ನೀರು ಪಾಲಾಗಿರುವ ಘಟನೆ ಜಿಲ್ಲೆ ಟಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ಜರುಗಿದೆ.
ಭರತ್, ಲಿಖಿತ್ ಮೃತರು.ಮೇದಿನಿ ಗ್ರಾಮದ ರಾಮಕಟ್ಟೆ ಬಳಿ ಈಜಲು ಐವರು ತೆರಳಿದ್ದರು. ಈ ವೇಳೆ ಭರತ್ ಹಾಗೂ ಲಿಖಿತ್ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು, ಉಳಿದ ಮೂವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ನೀರಿನಲ್ಲಿ ಕೊಚ್ಚಿ ಹೋಗಿರುವ ಭರತ್ ಹಾಗೂ ಲಿಖಿತ್ ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.