ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರು ಪಾಲಾಗಿದ್ದಾರೆ. ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ಭಾನುವಾರ ನಡೆದಿದೆ. 15 ವರ್ಷದ ಸೋಮಶೇಖರ್ ದೇವರಮನಿ, 17 ವರ್ಷದ ಪರನಗೌಡ ಬೀಳಗಿ, 16 ವರ್ಷದ ಮಲ್ಲಪ್ಪ ಬಗಲಿ ಮೃತರು ಎಂದು ಗುರುತಿಸಲಾಗಿದೆ.
ಬಾಲಕ ಸೋಮಶೇಖರ್ನ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬನ ಪತ್ತೆಗೆ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಬಾಲಕರು ಬಾಗಲಕೋಟೆ ಇಲ್ಯಾಳ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.