ಬೆಂಗಳೂರು: ಏ.5ರಂದು ಬೆಲೆ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ರಾಜ್ಯ ಸರ್ಕಾರ ಬಡವರಿಗೆ ಬರೆ ಎಳೆಯುತ್ತಿದೆ. ಇದರ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಬೆಲೆ ಏರಿಕೆ ನಿರ್ಧಾರ ವಾಪಸ್ ಪಡೆಯಲು ಹೋರಾಟ ನಡೆಸಲಿದ್ದೇವೆ.
ಏ.2ರಂದು ಫ್ರೀಡಂ ಪಾರ್ಕ್ನಲ್ಲಿ ಬೆಳಗ್ಗೆ 11 ಗಂಟೆಯಿಂದ ಅಹೋರಾತ್ರಿ ಧರಣಿ ಪ್ರಾರಂಭವಾಗಲಿದೆ. ಹಾಲಿ ಮಾಜಿ ಶಾಸಕರು, ಪರಿಷತ್ ಸದಸ್ಯರು, ಪದಾಧಿಕಾರಿಗಳು ಭಾಗಿಯಾಗುತ್ತಾರೆ. ಏ.2ರಂದು ಅಹೋರಾತ್ರಿ ಧರಣಿ ಪ್ರಾರಂಭವಾಗಲಿದೆ. ಏ.5ರಂದು ರಾಜ್ಯಾದ್ಯಂತ ಹೋರಾಟ ನಡೆಯಲಿದೆ. ಎಲ್ಲಾ ಜಿಲ್ಲೆಗಳಲ್ಲಿ ರಸ್ತೆಗೆ ಇಳಿದು ಹೋರಾಟ ಮಾಡಲಿದೆ ಎಂದರು.
Happy Ramadan Eid 2025: ರಂಜಾನ್ ಹಬ್ಬದ ಮಹತ್ವ, ಇತಿಹಾಸ ಆಚರಣೆಯ ವಿಧಾನ ಹೀಗಿದೆ ನೋಡಿ..!
ಲ್ಯಾಬ್ ಶುಲ್ಕ ಜಾಸ್ತಿ ಆಗಿದೆ. ಬಡವರಿಗೂ ಬರೆ ಎಳೆಯೋ ಕೆಲಸ ಈ ಸರ್ಕಾರ ಮಾಡಿದೆ. ನೋಂದಣಿ-ಮುದ್ರಾಂಕ ಶುಲ್ಕ ಜಾಸ್ತಿ ಆಗಿದೆ. ಪ್ರೊಫೆಷನಲ್ ಟ್ಯಾಕ್ಸ್ ಜಾಸ್ತಿ ಮಾಡಿದ್ದಾರೆ. ಬಸ್ ಟಿಕೆಟ್ ದರ ಏರಿಕೆ ಆಗಿದೆ. ಬೀಜಗಳ ಬೆಲೆ ಜಾಸ್ತಿ ಮಾಡಿದ್ದಾರೆ. ನೀರಿನ ದರ ಜಾಸ್ತಿ ಮಾಡಿದ್ದಾರೆ. ಈ ಸರ್ಕಾರ ಜನರಿಗೆ, ಮತದಾರರಿಗೆ ಶಾಪ ಕೊಡುವ ಕೆಲಸ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.