ವಿಜಯಪುರ : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಕುರಿತು ನಡೆಗೆ ಮಾಜಿ ಶಾಸಕ ಮಹೇಶ್ ಕುಮಟಳ್ಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರನ್ನು ಉಚ್ಚಾಟಿಸಿರುವುದು ಬಿಜೆಪಿ ಮೇಲೆ , ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದರು. ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶಗಳಲ್ಲಿ ಯತ್ನಾಳ್ ಅವರಿಗೆ ಸಾಕಷ್ಟು ಬೆಂಬಲವಿದೆ. ಅವರಂತಹ ಬಲಿಷ್ಠ ನಾಯಕನನ್ನು ಹೊರಹಾಕುವುದರಿಂದ ಪಂಚಮಸಾಲಿ ಸಮುದಾಯವನ್ನು ಮಾತ್ರವಲ್ಲದೆ ಇತರ ಸಮುದಾಯಗಳ ಮತದಾರರ ಮೇಲೆ ಪರಿಣಾಮ ಬೀರಲಿದೆ ಎಂದರು.
ಯತ್ನಾಳ್ ಯಾವಾಗಲೂ ಹಿಂದುತ್ವ ರಾಜಕೀಯದ ಪರವಾಗಿ ನಿಂತಿದ್ದಾರೆ. ಪಕ್ಷದ ರಾಷ್ಟ್ರೀಯ ನಾಯಕತ್ವದ ನಿರ್ಧಾರವನ್ನು ನಾನು ಗೌರವಿಸುತ್ತೇನೆ, ಆದರೆ, ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ನಿಲುವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.