ಬೆಂಗಳೂರು:- ಬರೆ, ಬರೆ, ಬರೆ… ಸಧ್ಯ ಇದು ಗ್ಯಾರಂಟಿ ಸರ್ಕಾರದ ಶ್ಲೋಕ. ಅಗತ್ಯ ವಸ್ತುಗಳು ಹಾಗೂ ಸೇವೆಗಳ ದರ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ಜನಸಾಮಾನ್ಯರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಿದೆ. ಗ್ಯಾರಂಟಿ ಸರ್ಕಾರ ಪ್ರತಿ ಲೀಟರ್ ಡೀಸೆಲ್ ಬೆಲೆಯನ್ನು 2 ರೂ. ಏರಿಕೆ ಮಾಡಿದ್ದು, ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಬರೆ ಎಳೆದಂತಾಗಿದೆ.
ಪಕ್ಷ ಬಿಟ್ಟು ಹೋರಾಡುವ ತಾಕತ್ತಿದ್ರೆ ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಗೆಲ್ಲಲಿ: ರೇಣುಕಾಚಾರ್ಯ!
ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44% ರಿಂದ 21.17 % ಗೆ ಏರಿಕೆ ಮಾಡಲಾಗಿದೆ. ಸದ್ಯ ರಾಜ್ಯದಲ್ಲಿ ಪ್ರತಿ ಲೀಟರ್ ಡೀಸೆಲ್ಗೆ 88.93 ರೂ. ದರವಿದೆ. ತೆರಿಗೆ ಏರಿಕೆಯಿಂದ ದರ 90.93 ರೂ.ಗೆ ಆಗಲಿದೆ. ಪೆಟ್ರೋಲ್ ಮೇಲೆ ಮಾರಾಟ ತೆರಿಗೆಯನ್ನು ಏರಿಸದ ಕಾರಣ ಪ್ರತಿ ಲೀಟರ್ ಪೆಟ್ರೋಲ್ ದರ 102. 84 ರೂ.ಇರಲಿದೆ.
ಸರಕು ಸಾಗಾಣಿಕೆ ಮಾಡುವ ವಾಹನಗಳಾದ ಟ್ರಕ್, ಲಾರಿಗಳು ಡೀಸೆಲ್ ಬಳಸುವ ಕಾರಣ ಮುಂದಿನ ದಿನಗಳಲ್ಲಿ ಇದರ ನೇರ ಪರಿಣಾಮ ದಿನ ಬಳಕೆಯ ವಸ್ತುಗಳ ಮೇಲೆ ತಟ್ಟಲಿದೆ. ಇದರಿಂದಾಗಿ ದಿನ ಬಳಕೆ ತರಕಾರಿ, ಆಹಾರ ವಸ್ತುಗಳ ಬೆಲೆಯೂ ಏರಿಕೆ ಆಗಲಿದೆ.