ಮಂಗಳವಾರ ನಡೆದ IPL ಪಂದ್ಯದಲ್ಲಿ ಲಕ್ನೋ ವಿರುದ್ಧ ಪಂಜಾಬ್ ಗೆ ಭರ್ಜರಿ ಜಯ ಸಿಕ್ಕಿದೆ.ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎಂಟು ವಿಕೆಟ್ಗಳಿಂದ ಸೋಲಿಸುವ ಮೂಲಕ ಈ ಸೀಸನ್ನ ಎರಡನೇ ಗೆಲುವು ದಾಖಲಿಸಿದೆ.
ರನ್ಯಾ, ಹನಿಟ್ರ್ಯಾಪ್ ಪ್ರಕರಣ: ಇಂದು ಡೆಲ್ಲಿಯಲ್ಲಿ ಹೈಕಮಾಂಡ್ ಗೆ ಸಿಎಂ, ಡಿಸಿಎಂ ರಿಂದ ವರದಿ ಸಾಧ್ಯತೆ!
ಪ್ರಭಸಿಮ್ರನ್ ಸಿಂಗ್ ಮತ್ತು ಶ್ರೇಯಸ್ ಅಯ್ಯರ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 7 ವಿಕೆಟ್ ನಷ್ಟಕ್ಕೆ 171 ರನ್ ಹೊಡೆಯಿತು. ಗುರಿ ಬೆನ್ನಟ್ಟಿದ ಪಂಜಾಬ್ 16.2 ಓವರ್ಗಳಲ್ಲಿ 177 ರನ್ ಹೊಡೆಯಿತು.
ಪಂಜಾಬ್ ಬ್ಯಾಟ್ಸ್ಮನ್ಗಳನ್ನು ಕಟ್ಟಿಹಾಕುವಲ್ಲಿ ಲಕ್ನೋ ವಿಫಲವಾಯ್ತು. ಪ್ರಿಯಾಂಶ್ ಆರ್ಯ 8 ರನ್ ಗಳಿಸಿ ಔಟಾದರೂ ಎರಡನೇ ವಿಕೆಟಿಗೆ ಪ್ರಭಸಿಮ್ರನ್ ಸಿಂಗ್ ಮತ್ತು ಶ್ರೇಯಸ್ ಅಯ್ಯರ್ 44 ಎಸೆತಗಳಲ್ಲಿ 84 ರನ್ ಜೊತೆಯಾಟವಾಡುವಾಗಲೇ ಪಂಜಾಬ್ ಜಯ ಖಚಿತವಾಗಿತ್ತು. ಮುರಿಯದ ಮೂರನೇ ವಿಕೆಟಿಗೆ ಶ್ರೇಯಸ್ ಮತ್ತು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕೆ ಇಳಿದ ನೆಹಾಲ್ ವಧೇರಾ 37 ಎಸೆತಗಳಲ್ಲಿ 67 ರನ್ ಜೊತೆಯಾಟವಾಡುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.