ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ಅತ್ಯಂತ ಕಠೋರವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಬೇಕೆಂದು ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ಈ ಹೋರಾಟದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕರು, ಎಂಎಲ್ಸಿಗಳು ಭಾಗಿಯಾಗಿ ಸ್ಪೀಕರ್ ಯುಟಿ ಖಾದರ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ಲೇ ಕಾರ್ಡ್ ಹಿಡಿದು ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಸುನಿಲ್ ಕುಮಾರ್, ಸಿ.ಟಿ ರವಿ, ಜನಾರ್ದನ ರೆಡ್ಡಿ, ಸಿಸಿ ಪಾಟೀಲ್, ಬೈರತಿ ಬಸವರಾಜ್ ಸೇರಿದಂತೆ ವಿಧಾನಸಭೆ, ವಿಧಾನಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.