ಬೆಳಗಾವಿ: ಶಾಸಕ ರಾಜು ಕಾಗೆ ಅವರ ಸಹೋದರನ ಮಗ ಚಾಲನೆ ಮಾಡುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು ಪುಣೆ ಹೆದ್ದಾರಿಯಲ್ಲಿ ನಡೆದಿದೆ.
ಗೋಕಾಕ್ ನ ಬಸವರಾಜ ಪುಡಕಲಕಟ್ಟಿ(22) ಮೃತ ದುರ್ದೈವಿಯಾಗಿದ್ದು, ಬಸವರಾಜ ಮತ್ತು ಇಬ್ಬರು ಸ್ನೇಹಿತರು ಬೆಳಗಾವಿಯಿಂದ ಕಿತ್ತೂರಿಗೆ ಬೈಕ್ ಮೇಲೆ ಕೆಲಸಕ್ಕೆ ಹೊರಟ್ಟಿದ್ದರು. ಈ ವೇಳೆ ಶಾಸಕ ರಾಜು ಕಾಗೆ ಸಹೋದರನ ಪುತ್ರ ಶ್ರೀಪ್ರಸಾದ್ ಸಿದ್ದನಗೌಡ ಕಾಗೆ ಪ್ರಯಾಣಿಸುತ್ತಿದ್ದ ಕಾರು ಬೈಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಸಣ್ಣವಿಠ್ಠಲ್ ದುರದುಂಡಿ, ನಿಂಗಪ್ಪ ಹೆಬ್ಬಾಳಗೆ ಗಂಭೀರ ಗಾಯಗಳಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮೃತ ಬಸವರಾಜ ಮೃತದೇಹ ಶಿಪ್ಟ್ ಮಾಡಲಾಗಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.