ಬೆಂಗಳೂರು:- ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಎದುರಾಗಿದ್ದು, ಉಬರ್, ರ್ಯಾಪಿಡೋ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಚಿನ್ನದ ರಾಣಿಗೆ ಗಂಡನಿಂದ ಶಾಕ್: ವಿಚ್ಛೇದನಕ್ಕೆ ಅರ್ಜಿ ಹಾಕಿದ ರನ್ಯಾ ಪತಿ!
ಹೈಕೋರ್ಟ್ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಈ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಹೀಗಾಗಿ ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವಂತೆ ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಆರು ವಾರಗಳ ಕಾಲಾವಕಾಶ ನೀಡಿ. ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದ್ದು, 3 ತಿಂಗಳಿನಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 3 ರ ಅಡಿಯಲ್ಲಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆರು ವಾರಗಳ ಒಳಗೆ ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಸ್ಥಗಿತಗೊಳ್ಳುವಂತೆ ನೋಡಿಕೊಳ್ಳಲು ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿದೆ.