ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ನಗರಸಭೆಗೆ ಉಪಲೋಕಾಯುಕ್ತರು ದಿಢೀರ್ ಭೇಟಿ ನೀಡಿದ್ದಾರೆ. ಮುಳಬಾಗಿಲು ನಗರಸಭೆಗೆ ದಿಢೀರ್ ಭೇಟಿ ನೀಡಿದ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ವಿವಿಧ ಶಾಖೆಗಳಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು.
ಈ ವೇಳೆ ನಗರಸಭೆ ಅವ್ಯವಸ್ಥೆ ಕಂಡು ಉಪಲೋಕಾಯುಕ್ತ ವೀರಪ್ಪ ಅವರು ಆಕ್ರೋಶಗೊಂಡಿದ್ದು, ಸ್ಥಳದಲ್ಲೇ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.