ಕೋಲ್ಕತ್ತಾ:- 25 ಶಿಕ್ಷಕರನ್ನು ವಜಾ ಮಾಡಿ ಆದೇಶ ಹೊರಡಿಸಿದ್ದ ಕೋಲ್ಕತ್ತಾ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠವು ಈ ಆದೇಶ ಹೊರಡಿಸಿದೆ.
ಅಕ್ರಮವಾಗಿ ಪಶ್ಚಿಮ ಬಂಗಾಳದಲ್ಲಿ ನೇಮಕ ಮಾಡಲಾಗಿದ್ದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 25,753 ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯನ್ನು ಅಮಾನ್ಯಗೊಳಿಸಿದ್ದ ಕೋಲ್ಕತ್ತಾ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ಮೂಲಕ ದೀದಿ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ನೇಮಕಾತಿ ಪ್ರಕ್ರಿಯೆಯು ಗಂಭೀರ ಅಕ್ರಮಗಳಿಂದ ಕೂಡಿದೆ. ಅಭ್ಯರ್ಥಿಗಳನ್ನು ಹುದ್ದೆಯಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ. ಇಡೀ ಆಯ್ಕೆ ಪ್ರಕ್ರಿಯೆಯೇ ಕಳಂಕಿತವಾಗಿದ್ದು, ನೇಮಕಾತಿ ಅಮಾನ್ಯಗೊಳಿಸಲಾಗಿದೆ ಎಂದು ಹೇಳಿದೆ.