ಬೆಂಗಳೂರು:- ನಗರದ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ ನೇಣಿಗೆ ಶರಣಾಗಿದ್ದು, ಇವರು ಬರೆದಿದ್ದ ಡೆತ್ ನೋಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಡೆತ್ನೋಟ್ನಲ್ಲಿ ವಿರಾಜಪೇಟೆಯ ಕಾಂಗ್ರೆಸ್ ಶಾಸಕ ಪೊನ್ನಣ್ಣ ಹೆಸರು ಉಲ್ಲೇಖಿಸಲಾಗಿದ್ದು, ಚರ್ಚೆಗೆ ಕಾರಣವಾಗಿದೆ. ನಾನು ಯಾವುದೇ ತಪ್ಪು ಮಾಡದೇ ಇದ್ದರೂ ನಾನು ವಾಟ್ಸಪ್ ಗ್ರೂಪಿನ ಅಡ್ಮಿನ್ ಆಗಿದ್ದಕ್ಕೆ ನನ್ನ ಮೇಲೆ ಸುಳ್ಳು ಎಫ್ಐಆರ್ ದಾಖಲು ಮಾಡಲಾಗಿದೆ. ಶಾಸಕ ಪೊನ್ನಣ್ಣ ಆದೇಶದಂತೆ ಪೊಲೀಸರು ನಡೆದುಕೊಂಡಿದ್ದಾರೆ. ಮಡಿಕೇರಿಯ ಕಾಂಗ್ರೆಸ್ ಶಾಸಕ ಮಂಥರ್ ಗೌಡ ಅವರು ನನಗೆ ಕಾಲ್ ಮಾಡಿ ಬೆದರಿಸಿದ್ದಾರೆ. ನನ್ನ ಆತ್ಮಹತ್ಯೆಗೆ ತೆನ್ನೀರ ಮಹೀನಾ ಕಾರಣ ಎಂದು ಡೆತ್ನೋಟ್ನಲ್ಲಿ ವಿನಯ್ ಬರೆದಿದ್ದಾರೆ.
FIR ನಲ್ಲಿ ಏನಿದೆ?
ನಮಸ್ತೇ,
ನಾನು ವಿನಯ್ ಕೆಎಸ್ 2 ತಿಂಗಳಿನಿಂದ ನನ್ನ ಮನಸ್ಸೇ ಹತೋಟಿಗೆ ಬರುತಿಲ್ಲ, ಯಾರೋ ಒಬ್ಬರು “ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು ವಾಟ್ಸಪ್ ಗ್ರೂಪಿನಲ್ಲಿ ಹಾಕಿದ ವಾಟ್ಸಪ್ ಮೆಸೇಜ್ಗೆ ಅಡ್ಮಿನ್ ಆದ ನಮ್ಮನ್ನು (ನನ್ನ ಅಡ್ಮಿನ್ ಮಾಡಿದ್ದು 5 ದಿನಗಳ ಹಿಂದೆ) ಹೊಣೆ ಮಾಡಿ ರಾಜಕೀಯ ಪ್ರೇರಿತ ಎಫ್ಐಆರ್ ಹಾಕಿ ಸಮಾಜಕ್ಕೆ ನಮ್ಮನ್ನು ಕಿಡಿಗೇಡಿಗಳು ಅಂತ ಪರಿಚಯಿಸಿ, ರಾಜಕೀಯ ದ್ವೇಷಕ್ಕೆ ನಮ್ಮ ಜೀವನದ ಜೊತೆ ಆಟ ಆಡಿದ ತೆನ್ನೀರ ಮಹೀನಾ ಅವರು ನನ್ನ ಸಾವಿಗೆ ನೇರ ಹೊಣೆ.
ನಮ್ಮ ಮೇಲೆ ಎಫ್ಐಆರ್ ಹಾಕಿ ಕಿಡಿಗೇಡಿಗಳು ಅಂತ ಇಡೀ ಕೊಡಗಿಗೆ ವೈರಲ್ ಮಾಡಿದ್ದು ಕೂಡಾ ಇವನೇ, ಅದು ಕೂಡಾ ನಮ್ಮ ಫೋಟೋ ಹಾಕಿ, ನಮ್ಮ ಫೋಟೋವನ್ನು ನಮ್ಮ ಅನುಮತಿ ಇಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ಹೇಗೆ ಉಪಯೋಗಿಸುತ್ತಾರೆ? ಅದು ಕೂಡಾ ಆರೋಪ ಸಾಬೀತು ಆಗದೇ, ಅದನ್ನು ನೋಡಿದ ನಮ್ಮ ಮನೆಯವರು ಹಾಗೂ ಸಂಬಧಿಕರಿಗೆ ಹೇಗೆ ಅನ್ನಿಸಿರಬಹುದು ಅಂತ ನೀವೇ ಊಹಿಸಿಕೊಳ್ಳಿ.
ಎಫ್ಐಆರ್ ಆದ ದಿನದಿಂದ ಜಾಮೀನು ಸಿಗುವ ತನಕ ನಾನು ನನ್ನ ಅಮ್ಮನ ಜೊತೆ ಮಾತನಾಡಿಲ್ಲ. ಈ ತೆನ್ನೀರ ಮಹೀನಾ ಕಾರಣಕ್ಕಾಗಿ ಜೀವ ಕಳೆದುಕೊಳ್ಳುತಿರುವ ವ್ಯಕ್ತಿ ನಾನು ಮೊದಲಿಗನಲ್ಲ. ಅವರನ್ನೇ ಕೇಳಿ, ಅವರ ಮಡದಿ ಆಸ್ಪತ್ರೆಗೆ ಸೇರಿದ ದಿನವೇ ಇನ್ನೊಂದು ಆತ್ಮಹತ್ಯೆ ನಡೆಯಿತು. ಆ ಆತ್ಮಹತ್ಯೆಗೂ ತನ್ನೀರ ಮಹೀನಾ ಹಾಗೂ ಅವನ ಮಡದಿಗೆ ಏನು ಸಂಬಂಧ ಅಂತ. ಆ ಆತ್ಮಹತ್ಯೆಯ ತನಿಖೆ ಆಗಬೇಕು. ಸಂಬಂಧಪಟ್ಟ ಅಧಿಕಾರಿಗಳು ಆ ಆತ್ಮಹತ್ಯೆ ಯ ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ಆಗಬೇಕು.
ಆ ಗ್ರೂಪಿನಲ್ಲಿ ಇರುವ ಯಾರನ್ನು ಬೇಕಾದರೂ ಕೇಳಿ ಎಂದು ಉಲ್ಲೇಖ ಮಾಡಿದ್ದಾರೆ.